9 ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇಮಕಕ್ಕೆ ರಾಷ್ಟ್ರಪತಿ ಅಂಕಿತ
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಸುಪ್ರೀಂಕೋರ್ಟ್ ನ ಕೊಲಿಜಿಯಂ ಶಿಫಾರಸು ಮಾಡಿದ್ದ ಮೂವರು ಮಹಿಳೆಯರು ಸೇರಿದಂತೆ ಎಲ್ಲಾ 9 ಹೆಸರುಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಅಂಕಿತ ಹಾಕಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
Published: 26th August 2021 12:14 PM | Last Updated: 26th August 2021 01:57 PM | A+A A-

ಸುಪ್ರೀಂ ಕೋರ್ಟ್
ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಸುಪ್ರೀಂಕೋರ್ಟ್ ನ ಕೊಲಿಜಿಯಂ ಶಿಫಾರಸು ಮಾಡಿದ್ದ ಮೂವರು ಮಹಿಳೆಯರು ಸೇರಿದಂತೆ ಎಲ್ಲಾ 9 ಹೆಸರುಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಅಂಕಿತ ಹಾಕಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಇದರಲ್ಲಿ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ಬಿ. ವಿ. ನಾಗರತ್ನ, ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ, ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಿಮಾ ಕೊಹ್ಲಿ, ಜಸ್ಟೀಸ್ ಸಿ.ಟಿ. ರವಿಕುಮಾರ್, ಎಂಎಂ ಸುಂದರೇಶ್ ಮತ್ತು ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ.ಎಸ್. ನರಸಿಂಹ ಅವರ ಹೆಸರು ಪಟ್ಟಿಯಲ್ಲಿದೆ.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ, ವಿಕ್ರಮ್ ನಾಥ್ ಮತ್ತು ಜೀತೇಂದ್ರ ಕುಮಾರ್ ಮಹೇಶ್ವರಿ ಅವರ ಹೆಸರನ್ನು ಕೂಡಾ ಕೊಲಿಜಿಯಂ ಶಿಫಾರಸು ಮಾಡಿತ್ತು.
ಈ ಪೈಕಿ ಕರ್ನಾಟಕದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ದೇಶದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗುವ ಸಾಧ್ಯತೆ ಹೆಚ್ಚಿದೆ.