ದೇಶದಲ್ಲಿ ಮತ್ತೆ ಕೊರೋನಾ ಏರಿಕೆ: ಕಳೆದ 24 ಗಂಟೆಗಳಲ್ಲಿ 44,658 ಹೊಸ ಪ್ರಕರಣ ಪತ್ತೆ, 496 ಸಾವು ದಾಖಲು
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 44,658 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3, 26,03,188ಕ್ಕೆ ಏರಿಕೆಯಾಗಿದೆ.
Published: 27th August 2021 10:35 AM | Last Updated: 27th August 2021 12:56 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 44,658 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3, 26,03,188ಕ್ಕೆ ಏರಿಕೆಯಾಗಿದೆ. 32,988 ಸೋಂಕಿತರು ಗುಣಮುಖರಾಗಿದ್ದು, ಒಟ್ಟಾರೇ ಗುಣಮುಖರಾದವರ ಸಂಖ್ಯೆ 3, 18,21,428ಕ್ಕೆ ಏರಿಕೆಯಾಗಿದೆ.
496 ಸೋಂಕಿತರು ಮೃತಪಟ್ಟಿದ್ದು, ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 4,36,861ಕ್ಕೆ ಏರಿಕೆಯಾಗಿದೆ.ದೇಶದಲ್ಲಿ ಸದ್ಯ 3,44,899 ಸಕ್ರಿಯ ಪ್ರಕರಣಗಳಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ನಿನ್ನೆ ದಿನ 18,24,931 ಮಾದರಿಗಳ ಪರೀಕ್ಷೆ ಸೇರಿದಂತೆ ಒಟ್ಟಾರೇ, 51,49,54,309 ಸ್ಯಾಂಪಲ್ ಗಳನ್ನು ಪರೀಕ್ಷೆ ಮಾಡಲಾಗಿದೆ. ಕಳೆದ 24 ಗಂಟೆಗಳಲ್ಲಿ 78,48,439 ಡೋಸ್ ಕೋವಿಡ್ ಲಸಿಕೆ ನೀಡಲಾಗಿದ್ದು, ಒಟ್ಟಾರೇ, 61, 22,08,542 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
India reports 44,658 new #COVID19 cases,32,988 recoveries and 496 deaths in the last 24 hrs, as per Health Ministry.
— ANI (@ANI) August 27, 2021
Total cases: 3,26,03,188
Total recoveries: 3,18,21,428
Active cases: 3,44,899
Death toll: 4,36,861
Total vaccinated: 61,22,08,542 (79,48,439) in last 24 hrs pic.twitter.com/3Ekda2cKBP