ಕೋವಿಡ್ ನಂತರದ ಸಮಸ್ಯೆಗಳಿಂದ ಹೃದಯದ ತೊಂದರೆ: ಅಶೋಕ್ ಗೆಹ್ಲೋಟ್

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ಅವರಿಗೆ ಕೋವಿಡೋತ್ತರ ಆರೋಗ್ಯ ಸಮಸ್ಯೆ  ತಲೆದೋರಿದ್ದು ಆ್ಯಂಜಿಯೋಪ್ಲಾಸ್ಟ್ ಮಾಡಲಾಗಿದೆ.
ಅಶೋಕ್ ಗೆಹ್ಲೋಟ್
ಅಶೋಕ್ ಗೆಹ್ಲೋಟ್

ಜೈಪುರ: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ಅವರಿಗೆ ಕೋವಿಡೋತ್ತರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು ಆ್ಯಂಜಿಯೋಪ್ಲಾಸ್ಟ್ ಮಾಡಲಾಗಿದೆ.

ಆಂಜಿಯೋಪ್ಲಾಸ್ಟಿಗೆ ಒಳಗಾದ ಒಂದು ದಿನದ ನಂತರ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕೋವಿಡ್ ನಂತರದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಕಾರಣ ಕಳೆದ ಹಲವು ದಿನಗಳಲ್ಲಿ ಜನರ ನಡುವೆ ಹೋಗಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

70 ವರ್ಷದ ಕಾಂಗ್ರೆಸ್ ನಾಯಕ ಏಪ್ರಿಲ್‌ನಲ್ಲಿ ವೈರಲ್ ಸೋಂಕಿಗೆ ಒಳಗಾಗಿದ್ದರು. ಮೇನಲ್ಲಿ ಚೇತರಿಸಿಕೊಂಡ ನಂತರ, ಅವರು ಕೋವಿಡ್ ನಂತರದ ಸಮಸ್ಯೆಗಳನ್ನು ಎದುರಿಸಿದರು. ಅನಾರೋಗ್ಯದಿಂದ ಚೇತರಿಸಿಕೊಂಡ ನಂತರ ಹಗಲು ರಾತ್ರಿ ಕೆಲಸ ಮಾಡದೇ ಸರಿಯಾಗಿ ವಿಶ್ರಾಂತಿ ಪಡೆಯಲಿಲ್ಲ ಎಂದು ಹೇಳಿದ್ದಾರೆ.

ವೈದ್ಯರ ಸಲಹೆಯಂತೆ ನಾನು ಸರಿಯಾದ ವಿಶ್ರಾಂತಿ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಈ ಕಾರಣದಿಂದಾಗಿ, ನಾನು ಇಷ್ಟು ದಿನ ಕೋವಿಡ್ ನಂತರದ ಸಮಸ್ಯೆಗಳನ್ನು ಎದುರಿಸುತ್ತಿದ್ದೇನೆ. ಈ ಕಾರಣದಿಂದಾಗಿ ಕಳೆದ ಹಲವು ದಿನಗಳಲ್ಲಿ, ನಾನು ರಾಜ್ಯದ ಜನರ ನಡುವೆ ಹೋಗಲು ಸಾಧ್ಯವಾಗಲಿಲ್ಲ, "ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜೈಪುರದ ‘ಎಸ್‌ಎಂಎಸ್‌’ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಆ್ಯಂಜಿಯೋಪ್ಲಾಸ್ಟಿ ನಡೆಸಲಾಗಿದೆ. ‘ಗೆಹ್ಲೋಟ್‌ ಅವರಿಗೆ ಆ್ಯಂಜಿಯೋಪ್ಲಾಸ್ಟಿ ನಡೆಸಲಾಗಿದ್ದು, ಯಶಸ್ವಿಯಾಗಿ ಒಂದು ಸ್ಟೆಂಟ್ ಅಳವಡಿಸಲಾಗಿದೆ. ಅವರು ಸದ್ಯ ಆರೋಗ್ಯವಾಗಿದ್ದಾರೆ’ ಎಂದು ಜೈಪುರದ ‘ಎಸ್‌ಎಂಎಸ್‌’ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಪ್ರಾಂಶುಪಾಲ ಡಾ. ಸುಧೀರ್ ಭಂಡಾರಿ ತಿಳಿಸಿದ್ದಾರೆ.

ಅವರಿಗೆ ಈ ಮೊದಲು ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ, ಆದರೆ ಕೊರೋನಾ ಪಾಸಿಟಿವ್ ಬಂದು ಚೇತರಿಸಿಕೊಂಡ ನಂತರ ಹೃದಯ ಸಂಬಂಧಿ ಸಮಸ್ಯೆ ತಲೆದೋರಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕೋವಿಡ್ ನಂತರ ಹೃದಯ, ಮೆದುಳು, ಮೂತ್ರಪಿಂಡ, ಪಿತ್ತಜನಕಾಂಗದಂತಹ ಅಂಗಗಳ ಮೇಲೆ ಪರಿಣಾಮ ಬೀರುತ್ತದೆ, ಅದರಿಂದ ಚೇತರಿಸಿಕೊಂಡ ನಂತರವೂ ತಲೆನೋವು, ಬಳಲಿಕೆ ಮತ್ತು ಉಸಿರಾಟದ ತೊಂದರೆಗಳು ಮುಂದುವರೆಯುತ್ತವೆ, ಹಾಗಾಗಿ ಕೋವಿಡ್ ಮತ್ತು ಕೋವಿಡ್ ನಂತರದ ಎರಡನ್ನೂ ಗಂಭೀರವಾಗಿ ಪರಿಗಣಿಸಬೇಕು ಎಂದು ಮುಖ್ಯಮಂತ್ರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com