ಆಗಸ್ಟ್ 30 ರಿಂದ ಕೇರಳದಲ್ಲಿ ನೈಟ್ ಕರ್ಫ್ಯೂ ಜಾರಿಗೆ

ಕೇರಳದಲ್ಲಿ ಕೋವಿಡ್-19 ಹರಡುವಿಕೆ ತಡೆಗಾಗಿ ಆಗಸ್ಟ್ 30 ರಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೂ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಶನಿವಾರ ತಿಳಿಸಿದರು. ಭಾನುವಾರ ಲಾಕ್ ಡೌನ್ ಮುಂದಿನ ಆದೇಶದವರೆಗೂ ಮುಂದುವರೆಯಲಿದೆ ಎಂದು ಅವರು ಮಾಹಿತಿ ನೀಡಿದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ತಿರುವನಂತಪುರಂ: ಕೇರಳದಲ್ಲಿ ಕೋವಿಡ್-19 ಹರಡುವಿಕೆ ತಡೆಗಾಗಿ ಆಗಸ್ಟ್ 30 ರಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೂ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಶನಿವಾರ ತಿಳಿಸಿದರು. ಭಾನುವಾರ ಲಾಕ್ ಡೌನ್ ಮುಂದಿನ ಆದೇಶದವರೆಗೂ ಮುಂದುವರೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ವರ್ಚುಯಲ್ ಪ್ರೆಸ್ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಅವರು, ಲಾಕ್ ಡೌನ್ ಸಡಿಲಿಕೆಯಾದ ನಂತರ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಓಣಂ ಹಬ್ಬದ ಸಂದರ್ಭದಲ್ಲಿ ಇದು ವಿಪರೀತವಾಗಿದೆ. ಆದಾಗ್ಯೂ, ಕೋವಿಡ್-19 ಲಸಿಕಾ ಅಭಿಯಾನ ಸೇರಿದಂತೆ ಚಿಕಿತ್ಸಾ ಸೌಕರ್ಯವನ್ನು ಸರ್ಕಾರ ಹೆಚ್ಚಿಸಿದೆ ಎಂದರು.

ಲಸಿಕೆ ಹಾಕುವಿಕೆ ಚುರುಕುನಿಂದ ನಡೆಯುತ್ತಿದೆ. ಆದಷ್ಟು ಬೇಗ ಹಿಂದಿನ ರೋಗ ನಿರೋಧಕ ಶಕ್ತಿ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು. ಅವರ ಪ್ರಕಾರ ವೈರಸ್ ಸೋಂಕಿಗೆ ಒಳಗಾಗದ ಜನರ ಸಂಖ್ಯೆ ಇನ್ನೂ ಅಧಿಕವಾಗಿದೆ. ಸೆರೋಪ್ರೆವೆಲೆನ್ಸ್ ಅಧ್ಯಯನದ ವರದಿಗಳ ಪ್ರಕಾರ, ರಾಜ್ಯದಲ್ಲಿ ಶೇ. 44.4 ರಷ್ಟು ಜನರು ಸೋಂಕಿಗೆ ತುತ್ತಾಗಿದ್ದಾರೆ.

ದೇಶದಲ್ಲಿ ವೇಗವಾಗಿ ಲಸಿಕೆ ನೀಡುತ್ತಿರುವ ರಾಜ್ಯ ಕೇರಳವಾಗಿದೆ. ಒಂದು ದಿನದಲ್ಲಿ 5 ಲಕ್ಷ ಡೋಸ್ ಲಸಿಕೆ ನೀಡಲಾಗುತ್ತಿದೆ. ಮರಣ ಪ್ರಮಾಣ ಈಗಲೂ ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಪಿಣರಾಯ್ ವಿಜಯನ್ ತಿಳಿಸಿದರು. ಕೇರಳದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 31,265 ಹೊಸ ಪ್ರಕರಣಗಳು, 21,468 ಚೇತರಿಕೆ ಹಾಗೂ 153 ಸಾವಿನ ಪ್ರಕರಣಗಳು ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com