ಹರ್ಯಾಣದಲ್ಲಿ ರೈತರಿಂದ ಪ್ರತಿಕೃತಿ ದಹನ, ರಸ್ತೆ ತಡೆ: ಪೊಲೀಸರಿಂದ  ಲಾಠಿ ಚಾರ್ಜ್

ಹರ್ಯಾಣದಲ್ಲಿ ರೈತರ ಮೇಲಿನ ಲಾಠಿಚಾರ್ಚ್ ವಿರೋಧಿಸಿ ಪಂಜಾಬಿನಲ್ಲಿ ಭಾನುವಾರ ಸುಮಾರು ಎರಡು ಗಂಟೆಗಳ ಕಾಲ ರಸ್ತೆ ತಡೆ, ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನಡೆಸುತ್ತಿರುವ ರೈತರು
ಪ್ರತಿಭಟನೆ ನಡೆಸುತ್ತಿರುವ ರೈತರು

ಚಂಡಿಘಡ: ಹರ್ಯಾಣದಲ್ಲಿ ರೈತರ ಮೇಲಿನ ಲಾಠಿಚಾರ್ಚ್ ವಿರೋಧಿಸಿ ಪಂಜಾಬಿನಲ್ಲಿ ಭಾನುವಾರ ಸುಮಾರು ಎರಡು ಗಂಟೆಗಳ ಕಾಲ ರಸ್ತೆ ತಡೆ, ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸಿದರು. ಕರ್ನಾಲ್ ನಲ್ಲಿ  ರೈತರ ಮೇಲೆ ಲಾಠಿಚಾರ್ಜ್ ಮಾಡಿದ್ದನ್ನು ವಿರೋಧಿಸಿ ವಿವಿಧ ರೈತ ಸಂಘಟನೆಗಳು ಬಿಜೆಪಿ ಸರ್ಕಾರದ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಶನಿವಾರ ಬಿಜೆಪಿ ಸಭೆ ವಿರುದ್ಧ ಪ್ರತಿಭಟನೆ ನಡೆಸಲು ಕರ್ನಾಲ್ ನತ್ತ ತೆರಳುತ್ತಿದ್ದ ರೈತರ ಗುಂಪಿನ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರಿಂದ ಸುಮಾರು 10 ರೈತರು ಗಾಯಗೊಂಡಿದ್ದರು. ಎರಡು ಗಂಟೆಗಳ ಕಾಲ ನಡೆದ ಪ್ರತಿಭಟನೆಯಿಂದಾಗಿ ವಾಹನ ಸವಾರರು ತೀವ್ರ ತೊಂದರೆ ಪಡುವಂತಾಗಿತ್ತು. ರೈತರ ಮೇಲೆ ಪೊಲೀಸ್ ಲಾಠಿಚಾರ್ಜ್ ನ್ನು ಕಿಸಾನ್ ಸಂಘರ್ಷ ಮಜ್ದೂರ್ ಕಮಿಟಿ ಪ್ರಧಾನ ಕಾರ್ಯದರ್ಶಿ ಶ್ರವನ್ ಸಿಂಗ್ ಪಂದೇರ್ ತೀವ್ರವಾಗಿ ಖಂಡಿಸಿದ್ದಾರೆ.

ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ ನಂತರ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಹುದ್ದೆಯಲ್ಲಿ ಮುಂದುವರೆಯಲು ಸಾಧ್ಯವಿಲ್ಲ, ನೈತಿಕತೆ ಆಧಾರದ ಮೇಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪಂದೇರ್ ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com