ದೇಶದಾದ್ಯಂತ 63 ಕೋಟಿ ಡೋಸ್‌ ಲಸಿಕೆ ವಿತರಣೆ: ಕೇಂದ್ರ ಸರ್ಕಾರ

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 73.85 ಲಕ್ಷ ಡೋಸ್‌ ಲಸಿಕೆ ನೀಡುವುದರೊಂದಿಗೆ ಇದುವರೆಗೆ ಲಸಿಕೆ ವಿತರಣೆ ಪ್ರಮಾಣ 63 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 73.85 ಲಕ್ಷ ಡೋಸ್‌ ಲಸಿಕೆ ನೀಡುವುದರೊಂದಿಗೆ ಇದುವರೆಗೆ ಲಸಿಕೆ ವಿತರಣೆ ಪ್ರಮಾಣ 63 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 4 ಕೋಟಿಗೂ ಹೆಚ್ಚು ಬಳಕೆಯಾಗದ ಲಸಿಕೆಗಳು ಉಳಿದಿವೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ ಸುಮಾರು 63,09,17,927 ಡೋಸ್‌ ಲಸಿಕೆಗಳನ್ನು ವಿವಿಧ ಮೂಲಗಳಿಂದ ಒದಗಿಸಲಾಗಿದೆ ಎಂದು ತಿಳಿಸಿದೆ. 

ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 45,083 ಹೊಸ ಕೇಸ್ ಪತ್ತೆಯಾಗಿದ್ದು 460 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com