ಎಐಯುಡಿಎಫ್ ಜೊತೆಗಿನ ಮೈತ್ರಿ ಮುರಿದುಕೊಳ್ಳಲು ಕಾಂಗ್ರೆಸ್ ನಿರ್ಧಾರ

ಬಿಜೆಪಿ ಜೊತೆಗಿನ ಸಂಬಂಧ ಹಿನ್ನೆಲೆಯಲ್ಲಿ ಬದ್ರುದ್ದೀನ್ ಅಜ್ಮಲ್ ಅವರ ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಾಂಟ್ ಜೊತೆಗಿನ ಸಂಬಂಧವನ್ನು ಮುರಿದುಕೊಳ್ಳಲು ಅಸ್ಸಾಂ ಕಾಂಗ್ರೆಸ್ ನಿರ್ಧರಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಅಸ್ಸಾಂ: ಬಿಜೆಪಿ ಜೊತೆಗಿನ ಸಂಬಂಧ ಹಿನ್ನೆಲೆಯಲ್ಲಿ ಬದ್ರುದ್ದೀನ್ ಅಜ್ಮಲ್ ಅವರ ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಾಂಟ್ ಜೊತೆಗಿನ ಸಂಬಂಧವನ್ನು ಮುರಿದುಕೊಳ್ಳಲು ಅಸ್ಸಾಂ ಕಾಂಗ್ರೆಸ್ ನಿರ್ಧರಿಸಿದೆ.

ಮೈತ್ರಿ ಪಕ್ಷ ಎಐಯುಡಿಎಫ್ ನ ನಡವಳಿಕೆ ಮತ್ತು ಬಿಜೆಪಿ ಜೊತೆಗಿನ ಸಂಬಂಧ ಕಾಂಗ್ರೆಸ್ ಪಕ್ಷದ ಸದಸ್ಯರನ್ನು ಕಂಗೆಡಿಸಿದೆ. ಎಐಯುಡಿಎಫ್ ನಾಯಕರು ಮತ್ತು ಹಿರಿಯ ನಾಯಕರು ಸತತವಾಗಿ ಬಿಜೆಪಿ ಮತ್ತು ಮುಖ್ಯಮಂತ್ರಿಯನ್ನು ಹೊಗಳುತ್ತಿರುವುದರಿಂದ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ದೃಷ್ಟಿ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಕಿಬುಲ್ ಹುಸೈನ್ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಆಳವಾದ ಚರ್ಚೆ ನಂತರ ಎಐಯುಡಿಎಫ್ ಜೊತೆಗೆ ಮೈತ್ರಿಯನ್ನು ಮುರಿದುಕೊಳ್ಳಲು ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ ಕೋರ್ ಕಮಿಟಿ ಸದಸ್ಯರು ಒಮ್ಮತದಿಂದ ನಿರ್ಧಾರ ಕೈಗೊಂಡಿದ್ದಾರೆ. ಈ ಸಂಬಂಧ ಎಐಸಿಸಿಗೆ ಮಾಹಿತಿಯನ್ನು ಕಳುಹಿಸಲಾಗುವುದು ಎಂದು ಹುಸೈನ್ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com