ಕರ್ನಾಟಕದ ನಾಗರತ್ನ ಬಿ.ವಿ. ಸೇರಿದಂತೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ 9 ಮಂದಿ ಪ್ರಮಾಣ ವಚನ ಸ್ವೀಕಾರ

ಇತ್ತೀಚೆಗಷ್ಟೇ ದೇಶದ ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದ ಕರ್ನಾಟಕದ ನ್ಯಾಯಮೂರ್ತಿ ನಾಗರತ್ನ ಬಿ.ವಿ ಸೇರಿದಂತೆ ದೇಶದ 9 ನ್ಯಾಯಾಮೂರ್ತಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಇಂದು ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಿದರು.
ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದ ಸಿಜಿಐ ರಮಣ
ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದ ಸಿಜಿಐ ರಮಣ

ನವದೆಹಲಿ: ಇತ್ತೀಚೆಗಷ್ಟೇ ದೇಶದ ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದ ಕರ್ನಾಟಕದ ನ್ಯಾಯಮೂರ್ತಿ ನಾಗರತ್ನ ಬಿ.ವಿ ಸೇರಿದಂತೆ ದೇಶದ 9 ನ್ಯಾಯಾಮೂರ್ತಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಇಂದು ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕರ್ನಾಟಕದವರಾದ, ರಾಜ್ಯ ಹೈಕೋರ್ಟಿನಲ್ಲಿ ನ್ಯಾಯಾಧೀಶರಾಗಿದ್ದ ನಾಗರತ್ನ ಬಿ.ವಿ. (Justice Nagarathna B.V.) ಸೇರಿ ಮೂವರು ಮಹಿಳಾ ನ್ಯಾಯಮೂರ್ತಿಗಳೂ ಒಳಗೊಂಡಂತೆ ಒಂಬತ್ತು ಹೊಸ ನ್ಯಾಯಮೂರ್ತಿಗಳು ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು. 

ನಾಗರತ್ನಿ ಬಿವಿ ಅವರೊಂದಿಗೇ ನ್ಯಾಯಮೂರ್ತಿ ಎ.ಎಸ್. ಓಕಾ, ನ್ಯಾಯಮೂರ್ತಿ, ವಿಕ್ರಮ್ ನಾಥ್, ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ, ನ್ಯಾಯಮೂರ್ತಿ ಹಿಮಾ ಕೊಹ್ಲಿ, ನ್ಯಾಯಮೂರ್ತಿ, ಸಿ.ಟಿ. ರವೀಂದ್ರಕುಮಾರ್, ನ್ಯಾಯಮೂರ್ತಿ ಎಂ.ಎಂ. ಸುಂದರೇಶ್ ಮತ್ತು ನ್ಯಾಯಮೂರ್ತಿ ಬೇಲಾ ತ್ರಿವೇದಿ ಹಾಗೂ ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರು ಮಂಗಳವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. 

ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ (Chief Justice N.V. Ramana) ಹೊಸದಾಗಿ ನೇಮಕಗೊಂಡ ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೊಧಿಸಿದರು. ಇನ್ನು ಇಂದಿನ ಪ್ರಮಾಣವಚನ ಕಾರ್ಯಕ್ರಮದೊಂದಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 33ಕ್ಕೆ ಏರಿಕೆಯಾದಂತಾಗಿದೆ.

ಮುಖ್ಯ ನ್ಯಾಯಮೂರ್ತಿಗಳಾಗುವ ಹಾದಿಯಲ್ಲಿ ಕರ್ನಾಟಕದ ನಾಗರತ್ನ ಬಿ.ವಿ 
ಇನ್ನು ಇಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ಪೀಕರಿಸಿರುವ ಕರ್ನಾಟಕದ ನ್ಯಾಯಮೂರ್ತಿ ನಾಗರತ್ನ ಬಿ.ವಿ ಅವರ ಹೆಸರು ಇದೀಗ ದೇಶಾದ್ಯಂತ ಭಾರಿ ಸದ್ದು ಮಾಡುತ್ತಿದೆ. ಏಕೆಂದರೆ ಸ್ವತಂತ್ರ್ಯ ಭಾರತದಲ್ಲಿ ಈವರೆಗೆ ದೇಶದ ಪರಮೋಚ್ಛ ನ್ಯಾಯಾಲಯಕ್ಕೆ ಮಹಿಳೆಯೊಬ್ಬರು ಮುಖ್ಯ ನ್ಯಾಯಮೂರ್ತಿಗಳಾದ ಇತಿಹಾಸವೇ ಇಲ್ಲ. ಇದೇ ಮೊದಲ ಬಾರಿಗೆ ಜಸ್ಟೀಸ್​ ಬಿ.ವಿ. ನಾಗರತ್ನ ಅವರು 2027ರಲ್ಲಿ ದೇಶದ ಮೊದಲ ಮಹಿಳಾ ಮುಖ್ಯನ್ಯಾಯಮೂರ್ತಿಯಾಗಿ ಹೊಸ ಇತಿಹಾಸ ಸೃಷ್ಠಿಸುವ ಸಾಧ್ಯತೆಗಳು ದಟ್ಟವಾಗಿವೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಪೈಕಿ ಹಿರಿಯರನ್ನು ಮುಖ್ಯ ನ್ಯಾಯಮೂರ್ತಿಗಳಾಗುತ್ತಾರೆ. ಇದು ಈವರೆಗೆ ನಡೆದುಕೊಂಡು ಬಂದಿರುವ ಪರಿಪಾಠ. ಇದೇ ರೀತಿ ಸದ್ಯ ಹಿರಿಯ ನ್ಯಾಯಮೂರ್ತಿಗಳಾದ ಯು.ಯು. ಲಲಿತ್‌, ಚಂದ್ರಚೂಡ್‌, ಸಂಜೀವ್‌ ಖನ್ನಾ, ಸೂರ್ಯಕಾಂತ್‌ ಮುಂದಿನ ದಿನಗಳಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಲಿದ್ದಾರೆ. ಈ ಪೈಕಿ ಕಡೆಯವರಾದ ನ್ಯಾಯಮೂರ್ತಿ ಸೂರ್ಯಕಾಂತ್‌ ಅವರ ಅವಧಿ ಮುಗಿದ ಬಳಿಕ 2027ರಲ್ಲಿ ಹಿರಿತನದ ಆಧಾರದಲ್ಲಿ ಕರ್ನಾಟಕ ಮೂಲದ ನ್ಯಾಯಮೂರ್ತಿ ನಾಗರತ್ನ ಬಿ.ವಿ. ಅವರಿಗೆ ಮುಖ್ಯ ನ್ಯಾಯಮೂರ್ತಿ ಆಗುವ ಸುಯೋಗ ಕೂಡಿಬರಲಿದೆ. ಹಾಗಾದರೆ ಅವರು ಸುಪ್ರೀಂ ಕೋರ್ಟಿನ ಮೊದಲ ಮಹಿಳಾ ಮುಖ್ಯ ನ್ಯಾಯಾಮೂರ್ತಿಯಾದ ದಾಖಲೆ ನಿರ್ಮಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com