ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ: ಸಿಎಂ ಹಿಮಂತ್ ಬಿಸ್ವಾ ಶರ್ಮಾ ಜೊತೆ ಪ್ರಧಾನಿ ಮೋದಿ ಮಾತುಕತೆ, ನೆರವಿನ ಭರವಸೆ

ಅಸ್ಸಾಂ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರೊಂದಿಗೆ ಚರ್ಚೆ ನಡೆಸಿದ್ದು, ಈ ವೇಳೆ ಕೇಂದ್ರ ಸರ್ಕಾರದಿಂದ ಎಲ್ಲಾ ರೀತಿಯ ಬೆಂಬಲ ನೀಡುವ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ. 
ಪ್ರವಾಹ ಹಿನ್ನೆಲೆಯಲ್ಲಿ ದೋಣಿಯಲ್ಲಿ ಕುಳಿತಿರುವ ಜನರು
ಪ್ರವಾಹ ಹಿನ್ನೆಲೆಯಲ್ಲಿ ದೋಣಿಯಲ್ಲಿ ಕುಳಿತಿರುವ ಜನರು

ನವದೆಹಲಿ: ಅಸ್ಸಾಂ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರೊಂದಿಗೆ ಚರ್ಚೆ ನಡೆಸಿದ್ದು, ಈ ವೇಳೆ ಕೇಂದ್ರ ಸರ್ಕಾರದಿಂದ ಎಲ್ಲಾ ರೀತಿಯ ಬೆಂಬಲ ನೀಡುವ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ. 

ಈ ಕುರಿತು ಟ್ವೀಟ್‌ ಮಾಡಿರುವ ಮೋದಿ ಅವರು, ‘ಅಸ್ಸಾಂನಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಅವರೊಂದಿಗೆ ಚರ್ಚಿಸಿದ್ದೇನೆ. ಪರಿಸ್ಥಿತಿ ನಿಯಂತ್ರಿಸಲು ಕೇಂದ್ರದಿಂದ ಅಗತ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ ತಿಳಿಸಿದ್ದೇನೆ. ನೆರೆ ಪೀಡಿತ ಪ್ರದೇಶಗಳಲ್ಲಿರುವ ಜನರ ಯೋಗಕ್ಷೇಮ ಮತ್ತು ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ‘ ಎಂದು ತಿಳಿಸಿದ್ದಾರೆ.

ಅಸ್ಸಾಂನ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದೆ. ಈವರೆಗೆ ಪ್ರವಾಹದಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ. 17 ಜಿಲ್ಲೆಗಳಲ್ಲಿ, 3.63 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಅಸ್ಸಾಂನ ಬರ್ಪೇಟಾ, ಬಿಸ್ವನಾಥ್, ಕ್ಯಾಚಾರ್, ಚಿರಾಂಗ್, ದರ್ರಾಂಗ್, ಧೇಮಾಜಿ, ಧುಬ್ರಿ, ದಿಬ್ರುಗಡ್, ಗೋಲಘಾಟ್, ಜೋರ್ಹತ್, ಕಮರೂಪ್, ಪಶ್ಚಿಮ ಕರ್ಬಿ ಆಂಗ್ಲಾಂಗ್, ಲಖಿಂಪುರ್, ಮಜುಲಿ, ಮೊರಿಗಾಂವ್ ಪ್ರವಾಹ ಸಂಕಷ್ಟಕ್ಕೆ ಸಿಲುಕಿರುವ ಜಿಲ್ಲೆಗಳಾಗಿವೆ. 

ಮೋದಿಯವರು ಮಾತುಕತೆ ನಡೆಸಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು, ಪ್ರಧಾನಮಂತ್ರಿಗಳು ದೂರವಾಣಿ ಕರೆ ಮಾಡಿದ್ದು, ಪ್ರವಾಹ ಪರಿಸ್ಥಿತಿ ಕುರಿತು ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಜ್ಯಕ್ಕೆ ಎಲ್ಲಾ ರೀತಿಯ ನೆರವು ನೀಡುವ ಭರವಸೆ ನೀಡಿದ್ದಾರೆಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com