ಪುಲ್ವಾಮದಲ್ಲಿ ಎನ್ಕೌಂಟರ್: ಇಬ್ಬರು ಜೈಷ್-ಇ-ಮೊಹಮ್ಮದ್ ಉಗ್ರರ ಹತ್ಯೆಗೈದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
Published: 01st December 2021 10:06 AM | Last Updated: 01st December 2021 10:06 AM | A+A A-

ಸಂಗ್ರಹ ಚಿತ್ರ
ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಪುಲ್ವಾಮಾದ ಕಸ್ಬಾ ಯಾರ್ ಪ್ರದೇಶದಲ್ಲಿ ಉಗ್ರರು ಅಡಗಿಕುಳಿತಿರುವ ಕುರಿತು ಖಚಿತ ಮಾಹಿತಿ ತಿಳಿದುಬಂದ ಹಿನ್ನೆಲೆಯಲ್ಲಿ ಭಾರತೀಯ ಸೇನಾಪಡೆ ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು.
ಈ ವೇಳೆ ಸ್ಥಳದಲ್ಲಿ ಅಡಗಿ ಕುಳಿತಿದ್ದ ಉಗ್ರರು ಸೇನಾಪಡೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಉಗ್ರರು ಗುಂಡಿನ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಸ್ಥಳವನ್ನು ಸುತ್ತುವರೆದ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಲು ಆರಂಭಿಸಿದ್ದಾರೆ. ಇದರಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.
ಎನ್ಕೌಂಟರ್ ನಲ್ಲಿ ಹತ್ಯೆಯಾದ ಇಬ್ಬರು ಉಗ್ರರು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ. ಹತ್ಯೆಯಾದವರನ್ನು ಯಾಸಿರ್ ಪರ್ರೆ, ಫುರ್ಖಾನ್ ಎಂದು ಗುರ್ತಿಸಲಾಗಿದೆ. ಯಾಸಿರ್ ಪರ್ರೆ ಜೆಇಎಂ ಉಗ್ರ ಸಂಘಟನೆಯ ಕಮಾಂಡರ್ ಆಗಿದ್ದು ಫುರ್ಖಾನ್ ಐಇಡಿ ತಜ್ಞ ಹಾಗೂ ವಿದೇಶಿ ಭಯೋತ್ಪಾದಕನಾಗಿದ್ದಾನೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.