ಚಳಿಗಾಲ ಅಧಿವೇಶನ: 12 ಸಂಸದರ ಅಮಾನತು ಹಿಂಪಡೆಯುವಂತೆ ಆಗ್ರಹ, ವಿಪಕ್ಷ ನಾಯಕರಿಂದ ಪ್ರತಿಭಟನೆ

12 ರಾಜ್ಯಸಭಾ ಸದಸ್ಯರ ಅಮಾನತು ಹಿಂಪಡೆಯುವಂತೆ ಒತ್ತಾಯಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರು ಸಂಸತ್ತಿನ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಬುಧವಾರ ಪ್ರತಿಭಟನೆ ಆರಂಭಿಸಿದ್ದಾರೆ.
ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸುತ್ತಿರುವ ವಿಪಕ್ಷ ನಾಯಕರು.
ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸುತ್ತಿರುವ ವಿಪಕ್ಷ ನಾಯಕರು.

ನವದೆಹಲಿ: 12 ರಾಜ್ಯಸಭಾ ಸದಸ್ಯರ ಅಮಾನತು ಹಿಂಪಡೆಯುವಂತೆ ಒತ್ತಾಯಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರು ಸಂಸತ್ತಿನ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಬುಧವಾರ ಪ್ರತಿಭಟನೆ ಆರಂಭಿಸಿದ್ದಾರೆ.

ಕಳೆದ ಮುಂಗಾರು ಅಧಿವೇಶನದ ಕೊನೆಯ ದಿನದಂದು ಗದ್ದಲ ಸೃಷ್ಟಿಸಿದ ಆರೋಪದ ಮೇಲೆ ವಿರೋಧ ಪಕ್ಷಗಳ 12 ಸಂಸದರನ್ನು ಸಂಸತ್ತಿನ ಚಳಿಗಾಲದ ಅಧಿವೇಶನದಿಂದ ಅಮಾನತುಗೊಳಿಸಲಾಗಿದೆ.

12 ಮಂದಿ ಸಂಸದರ ಪೈಕಿ ಆರು ಮಂದಿ ಕಾಂಗ್ರೆಸ್‌, ಟಿಎಂಸಿಯ ತಲಾ ಇಬ್ಬರು ಮತ್ತು ಶಿವಸೇನೆ ಹಾಗೂ ಸಿಪಿಎಂ ಮತ್ತು ಸಿಪಿಐನಿಂದ ತಲಾ ಒಬ್ಬರು ಸೇರಿದ್ದಾರೆ.

ಕಾಂಗ್ರೆಸ್‌ನ ಫೂಲೋ ದೇವಿ ನೇತಮ್, ಛಾಯಾ ವರ್ಮಾ, ರಿಪುನ್ ಬೋರಾ, ರಾಜಮಣಿ ಪಟೇಲ್, ಸೈಯದ್ ನಾಸಿರ್ ಹುಸೇನ್ ಮತ್ತು ಅಖಿಲೇಶ್ ಪ್ರಸಾದ್ ಸಿಂಗ್ ಅಮಾನತುಗೊಂಡಿದ್ದಾರೆ. ಶಿವಸೇನೆಯ ಪ್ರಿಯಾಂಕಾ ಚತುರ್ವೇದಿ ಮತ್ತು ಅನಿಲ್ ದೇಸಾಯಿ, ಟಿಎಂಸಿಯ ಡೋಲಾ ಸೇನ್ ಮತ್ತು ಶಾಂತಾ ಛೆಟ್ರಿ, ಸಿಪಿಎಂನಿಂದ ಎಲಮರಮ್ ಕರೀಂ ಮತ್ತು ಸಿಪಿಐನಿಂದ ಬಿನೋಯ್ ವಿಶ್ವಂ ಅವರು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಂಡ ವಿರೋಧ ಪಕ್ಷದ ಸಂಸದರಾಗಿದ್ದಾರೆ.

ಕಳೆದ ಆಗಸ್ಟ್​ ತಿಂಗಳಲ್ಲಿ ನಡೆದ ಸಂಸತ್​​ ಅಧಿವೇಶನದ ವೇಳೆ ರಾಜ್ಯಸಭೆಯಲ್ಲಿ ನಿಯಮ ದುರುಪಯೋಗ ಹಾಗೂ ಅಶಿಸ್ತಿನಿಂದ ನಡೆದುಕೊಂಡಿರುವ ಕಾರಣ ಸದಸ್ಯರನ್ನು ಅಮಾನತುಗೊಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com