ತೆಲಂಗಾಣ: ಮನೆಯಿಂದ ಹೊರ ಬಂದರೆ ಮಾಸ್ಕ್ ಮತ್ತು ಲಸಿಕೆ ಪ್ರಮಾಣಪತ್ರ ಅತ್ಯಗತ್ಯ

ಕೊರೋನಾ ಹೊಸ ರೂಪಾಂತರಿದ ಓಮಿಕ್ರಾನ್ ಭಾರತದಲ್ಲೂ ಪತ್ತೆಯಾಗಿದ್ದು, ವೈರಸ್ ವೇಗವಾಗಿ ಹರಡುತ್ತದೆ ಎಂಬ ಕಾರಣದಿಂದ ತೆಲಂಗಾಣ ಸರ್ಕಾರ ಗುರುವಾರದಿಂದ ಮಾಸ್ಕ್ ಕಡ್ಡಾಯ ನಿಯಮವನ್ನು ಮತ್ತೆ ಜಾರಿಗೊಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹೈದರಾಬಾದ್: ಕೊರೋನಾ ಹೊಸ ರೂಪಾಂತರಿದ ಓಮಿಕ್ರಾನ್ ಭಾರತದಲ್ಲೂ ಪತ್ತೆಯಾಗಿದ್ದು, ವೈರಸ್ ವೇಗವಾಗಿ ಹರಡುತ್ತದೆ ಎಂಬ ಕಾರಣದಿಂದ ತೆಲಂಗಾಣ ಸರ್ಕಾರ ಗುರುವಾರದಿಂದ ಮಾಸ್ಕ್ ಕಡ್ಡಾಯ ನಿಯಮವನ್ನು ಮತ್ತೆ ಜಾರಿಗೊಳಿಸಿದೆ. ಮಾಸ್ಕ್ ಧರಿಸದವರಿಗೆ 1000 ರೂಪಾಯಿ ದಂಡ ವಿಧಿಸಲಾಗುವುದು ಎಂದು ಸಾರ್ವಜನಿಕ ಆರೋಗ್ಯ ನಿರ್ದೇಶಕರು ಪ್ರಕಟಿಸಿದ್ದಾರೆ.

"ನಾಗರಿಕರು ಮಾಸ್ಕ್ ಧರಿಸದಿರುವಂತೆ ನೋಡಿಕೊಳ್ಳಲು ತೆಲಂಗಾಣ ಆರೋಗ್ಯ ಇಲಾಖೆ ಜಾರಿ ಅಧಿಕಾರಿಗಳು ನೋಡಿಕೊಳ್ಳಬೇಕು ಮತ್ತು ಮಾಸ್ಕ್ ಧರಿಸದವರಿಗೆ 1 ಸಾವಿರ ರೂಪಾಯಿ ದಂಡ ವಿಧಿಸಲಾಗುವುದು. ಇದು ಹೊಸ ನಿಯಮ ಅಲ್ಲ ಎಂದು" ತೆಲಂಗಾಣ ಸಾರ್ವಜನಿಕ ಆರೋಗ್ಯ ನಿರ್ದೇಶಕ ಡಾ ಜಿ ಶ್ರೀನಿವಾಸ್ ರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈಗ ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡುವ ಪ್ರತಿಯೊಬ್ಬರು ತಮ್ಮ ಎರಡೂ ಡೋಸ್ ಲಸಿಕೆ ಪಡೆದ ಪ್ರಮಾಣಪತ್ರವನ್ನು ಹೊಂದಿರಬೇಕು. ಅದನ್ನು ಆರೋಗ್ಯ ಸಿಬ್ಬಂದಿ ಪರಿಶೀಲಿಸುತ್ತಾರೆ ಎಂದು ಡಾ. ರಾವ್ ಹೇಳಿದ್ದಾರೆ.

"ಜನರು ತಮ್ಮ ಕೋವಿಡ್ ಲಸಿಕೆ ಪ್ರಮಾಣಪತ್ರಗಳನ್ನು ಜೊತೆಯಲ್ಲಿ ಕೊಂಡೊಯ್ಯಬೇಕು ಎಂದು ನಾವು ವಿನಂತಿಸುತ್ತೇವೆ. ತೆಲಂಗಾಣ ಆರೋಗ್ಯ ತಂಡಗಳು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡುತ್ತವೆ ಮತ್ತು ಲಸಿಕೆ ಪ್ರಮಾಣಪತ್ರಗಳನ್ನು ಪರಿಶೀಲಿಸುತ್ತಾರೆ. ಇದು ಎಚ್ಚರಿಕೆಯ ಕ್ರಮವಾಗಿದೆ ಮತ್ತು ವ್ಯಾಕ್ಸಿನೇಷನ್ ಬಗ್ಗೆ ಜಾಗೃತಿ ಮೂಡಿಸುತ್ತದೆ. ನಮ್ಮ ಕಾರ್ಯಸೂಚಿಯು ಜನರ ಆರೋಗ್ಯ ಮತ್ತು ಜೀವನವನ್ನು ಕಾಪಾಡುವುದು" ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com