ಇಂದು ದೆಹಲಿ ವಿಮಾನ ನಿಲ್ದಾಣಕ್ಕೆ 3,000 ಅಂತರಾಷ್ಟ್ರೀಯ ಪ್ರಯಾಣಿಕರ ಆಗಮನ, 6 ಮಂದಿಗೆ ಕೊರೋನಾ ಪಾಸಿಟಿವ್
ಬ್ರಿಟನ್, ಫ್ರಾನ್ಸ್ ಮತ್ತು ಜರ್ಮನಿ ಸೇರಿದಂತೆ ಹಲವು ದೇಶಗಳಿಂದ ಸುಮಾರು 3,000 ಅಂತರಾಷ್ಟ್ರೀಯ ಪ್ರಯಾಣಿಕರು ಗುರುವಾರ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ ಮತ್ತು ಅವರಲ್ಲಿ ಕನಿಷ್ಠ ಆರು ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ...
Published: 02nd December 2021 11:26 PM | Last Updated: 03rd December 2021 02:37 PM | A+A A-

ದೆಹಲಿ ವಿಮಾನ ನಿಲ್ದಾಣ
ನವದೆಹಲಿ: ಬ್ರಿಟನ್, ಫ್ರಾನ್ಸ್ ಮತ್ತು ಜರ್ಮನಿ ಸೇರಿದಂತೆ ಹಲವು ದೇಶಗಳಿಂದ ಸುಮಾರು 3,000 ಅಂತರಾಷ್ಟ್ರೀಯ ಪ್ರಯಾಣಿಕರು ಗುರುವಾರ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ ಮತ್ತು ಅವರಲ್ಲಿ ಕನಿಷ್ಠ ಆರು ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೊಸ ಕೊರೋನಾ ವೈರಸ್ ರೂಪಾಂತರಿ ಓಮಿಕ್ರಾನ್ ಹೊರಹೊಮ್ಮುವಿಕೆಯ ಹಿನ್ನೆಲೆಯಲ್ಲಿ 'ಅಪಾಯದಲ್ಲಿರುವ' ದೇಶಗಳಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಸೇರಿದಂತೆ ಹಲವು ಕಟ್ಟುನಿಟ್ಟಾದ ನಿಯಮಗಳು ಜಾರಿಯಲ್ಲಿವೆ.
ಇದನ್ನು ಓದಿ: ದೇಶದ 11 ವಿಮಾನ ನಿಲ್ದಾಣಗಳಲ್ಲಿ 1,502 ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ, ಯಾರಿಗೂ ಪಾಸಿಟಿವ್ ಬಂದಿಲ್ಲ
'ಹೊಸ ನಿಯಮಗಳ ಪ್ರಕಾರ. ಅಪಾಯದಲ್ಲಿರುವ' ದೇಶಗಳಿಂದ ಬರುವ ಪ್ರಯಾಣಿಕರು ಅವರ ಕೋವಿಡ್ ಪರೀಕ್ಷಾ ಫಲಿತಾಂಶ ಘೋಷಿಸುವವರೆಗೆ ವಿಮಾನ ನಿಲ್ದಾಣದಲ್ಲೇ ಇರಬೇಕು. ಇದರಿಂದ ಜನರು ಹಲವು ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲೇ ಕಾಯಬೇಕಾದ ಪರಿಸ್ಥಿತಿ ಇದೆ.
ಇನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ(ಎಎಐ)ದ ಅಡಿಯಲ್ಲಿ ಬರುವ ದೇಶದ 11 ವಿಮಾನ ನಿಲ್ದಾಣಗಳಲ್ಲಿ ಬುಧವಾರ ಒಟ್ಟು 1,502 ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ ಯಾರೊಬ್ಬರಿಗೂ ಪಾಸಿಟಿವ್ ಬಂದಿಲ್ಲ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.