ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಉಲ್ಬಣವಾಗಿರುವಂತೆಯೇ ಶಾಲೆಗಳನ್ನು ತೆರೆಯುವ ದೆಹಲಿ ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ.
ನಗರದಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ನಡುವೆಯೂ ಶಾಲೆಗಳನ್ನು ತೆರೆಯುವ ದೆಹಲಿ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಗುರುವಾರ ತರಾಟೆಗೆ ತೆಗೆದುಕೊಂಡಿದೆ.
ವಾಯುಮಾಲಿನ್ಯದ ಹಿನ್ನಲೆಯಲ್ಲಿ ಸರ್ಕಾರವು ವಯಸ್ಕರಿಗೆ ವರ್ಕ್ ಫ್ರಂ ಹೋಮ್ ಜಾರಿ ಮಾಡಿರುವ ಈ ಹೊತ್ತಿನಲ್ಲಿ ಮಕ್ಕಳನ್ನು ಶಾಲೆಗೆ ಹೋಗಲು ಏಕೆ ಒತ್ತಾಯಿಸಲಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿಕಾರಿದೆ. ಅಂತೆಯೇ 'ದೆಹಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣ ಹೆಚ್ಚುತ್ತಿದ್ದರೂ ಏನೂ ಆಗುತ್ತಿಲ್ಲ ಎಂದು ನಮಗೆ ಅನಿಸುತ್ತಿದೆ. ರಾಜಧಾನಿಯ ವಾಯು ಗುಣಮಟ್ಟವು ತೀವ್ರ ಹದಗೆಟ್ಟಿತ್ತು ಎಂದು ಹೇಳಿದೆ.
ಇನ್ನು ಭೂ ವಿಜ್ಞಾನ ಸಚಿವಾಲಯದ ವಾಯು ಗುಣಮಟ್ಟ ಮಾನಿಟರ್ 'SAFAR' ಪ್ರಕಾರ, 'ಗುರುವಾರ ದೆಹಲಿ ವಾಯು ಗುಣಮಟ್ಟವು ತೀವ್ರ ಹದಗೆಟ್ಟಿತ್ತು. AQI 8 ಗಂಟೆಗೆ 419ರಷ್ಟಿತ್ತು. ಅಂತೆಯೇ ದೆಹಲಿ ಕನಿಷ್ಠ ತಾಪಮಾನವು ಋತುವಿನ ಸರಾಸರಿಗಿಂತ ನಾಲ್ಕು ಪಟ್ಟು ಕಡಿಮೆ ಅಂದರೆ 13.4 ಡಿಗ್ರಿ ಸೆಲ್ಸಿಯಸ್ ನಷ್ಟಿದೆ. ಅಂತೆಯೇ ಉತ್ತಮ ಗಾಳಿಯ ವೇಗದಿಂದಾಗಿ ಗಾಳಿಯ ಗುಣಮಟ್ಟ ಶುಕ್ರವಾರದಿಂದ ಸುಧಾರಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
Advertisement