ಕೋವಿಡ್-19: ದೇಶದಲ್ಲಿಂದು 9,216 ಹೊಸ ಸೋಂಕು ಪ್ರಕರಣ, 391 ಸಾವು

ಶುಕ್ರವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 9,216 ಕೋವಿಡ್ ಪ್ಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 99 ಸಾವಿರಕ್ಕೆ ಕುಸಿದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಶುಕ್ರವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 9,216 ಕೋವಿಡ್ ಪ್ಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 99 ಸಾವಿರಕ್ಕೆ ಕುಸಿದಿದೆ.

ಇದೇ ಅವಧಿಯಲ್ಲಿ 391 ಸೋಂಕಿತರು ಸಾವಿಗೀಡಾಗಿದ್ದು, ಒಟ್ಟು ಸಾವಿನ ಸಂಖ್ಯೆ 4,70,115ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 99,976ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 8,612 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,40,45,666ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 11,57,156 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 64,46,68,082 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,25,75,05,514 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com