ಕೋವಿಡ್ ನಿಂದಾಗಿ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಮನ್ನಾ ಮಾಡಿದ ಮಹಾರಾಷ್ಟ್ರ ಸರ್ಕಾರ

ಕೊರೋನಾ ವೈರಸ್ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡಿರುವ 10 ಮತ್ತು 12ನೇ ತರಗತಿಯ ರಾಜ್ಯ ಪರೀಕ್ಷಾ ಮಂಡಳಿಯ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಮನ್ನಾ ಮಾಡಲು ಮಹಾರಾಷ್ಟ್ರ ಸರ್ಕಾರ ಗುರುವಾರ ನಿರ್ಧರಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮುಂಬೈ: ಕೊರೋನಾ ವೈರಸ್ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡಿರುವ 10 ಮತ್ತು 12ನೇ ತರಗತಿಯ ರಾಜ್ಯ ಪರೀಕ್ಷಾ ಮಂಡಳಿಯ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಮನ್ನಾ ಮಾಡಲು ಮಹಾರಾಷ್ಟ್ರ ಸರ್ಕಾರ ಗುರುವಾರ ನಿರ್ಧರಿಸಿದೆ.

ಪೋಷಕರನ್ನು ಕಳೆದ 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳ 2021-22ನೇ ಸಾಲಿನ ಪರೀಕ್ಷಾ ಶುಲ್ಕವನ್ನು ಮನ್ನಾ ಮಾಡಲಾಗುವುದು ಮಹಾರಾಷ್ಟ್ರ ಶಾಲಾ ಶಿಕ್ಷಣ ಸಚಿವೆ ವರ್ಷಾ ಗಾಯಕ್ವಾಡ್ ಅವರು ಗುರುವಾರ ಹೇಳಿದ್ದಾರೆ.

"ಸಾಂಕ್ರಾಮಿಕ ರೋಗದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ನಮ್ಮ ಕಡೆಯಿಂದ ಇದು ಒಂದು ಸಣ್ಣ ಸಾಂತ್ವನ - 2021-22 ರ ರಾಜ್ಯ ಬೋರ್ಡ್ ಪರೀಕ್ಷೆಗಳ ಪರೀಕ್ಷಾ ಶುಲ್ಕವನ್ನು ಮನ್ನಾ ಮಾಡಲಾಗುತ್ತಿದೆ" ಎಂದು ಅವರು ತಿಳಿಸಿದ್ದಾರೆ.

ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳು ಈಗಾಗಲೇ ಸಾಕಷ್ಟು ಅನುಭವಿಸಿದ್ದಾರೆ ಎಂದು ನಮಗೆ ಗೊತ್ತು. ಆದರೆ ಅವರ ಶಿಕ್ಷಣ ಮುಂದುವರಿಯಬೇಕು" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com