ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 138 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 138 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಹೇಳಿದೆ.
Published: 03rd December 2021 10:30 AM | Last Updated: 03rd December 2021 10:30 AM | A+A A-

ಸಂಗ್ರಹ ಚಿತ್ರ
ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 138 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಹೇಳಿದೆ.
ಈವರೆಗೆ ಕೇಂದ್ರವು ರಾಜ್ಯಗಳಿಗೆ 1,38,50,13,650 ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 22,05,87,426 ಲಸಿಕೆಗಳಿವೆ ಎಂದು ಹೇಳಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,25,75,05,514 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.