ಪಂಜಾಬಿ ಗಾಯಕ ಸಿಧು ಮೂಸೆವಾಲಾ ಕಾಂಗ್ರೆಸ್ ಸೇರ್ಪಡೆ

ಪಂಜಾಬಿನ ಹೆಸರಾಂತ ಗಾಯಕ ಸಿಧು ಮೂಸೆವಾಲಾ ಅವರಿಂದು ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ರಾಹುಲ್ ಗಾಂಧಿ ಅವರೊಂದಿಗೆ ಪಂಜಾಬಿ ಗಾಯಕ ಸಿಧು ಮೂಸೆವಾಲಾ
ರಾಹುಲ್ ಗಾಂಧಿ ಅವರೊಂದಿಗೆ ಪಂಜಾಬಿ ಗಾಯಕ ಸಿಧು ಮೂಸೆವಾಲಾ

ಚಂಡೀಘಡ: ಪಂಜಾಬಿನ ಹೆಸರಾಂತ ಗಾಯಕ ಸಿಧು ಮೂಸೆವಾಲಾ ಅವರಿಂದು ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಪಕ್ಷ ಸೇರ್ಪಡೆಯಾದ ನಂತರ ಮಾತನಾಡಿದ ಮೂಸೆವಾಲಾ, ನಾಲ್ಕು ವರ್ಷಗಳ ಹಿಂದೆ ಗಾಯಕ ವೃತ್ತಿ ಆರಂಭಿಸಿದ್ದೆ, ಆದರೆ, ಇದೀಗ ತನ್ನ ಜೀವನದಲ್ಲಿ ಹೊಸ ಹೆಜ್ಜೆಯನ್ನಿಡಲು ನಿರ್ಧರಿಸಿದ್ದೇನೆ. ಈಗಲೂ ಕೂಡಾ ನಾನು ಹಳ್ಳಿಯಲ್ಲಿಯೇ ವಾಸಿಸುತ್ತಿದ್ದೇನೆ. ತಂದೆ ಮಾಜಿ ಸೈನಿಕರಾಗಿದ್ದು, ತಾಯಿ ಗ್ರಾಮದ ಮುಖಂಡೆಯಾಗಿದ್ದಾರೆ. ನನ್ನೊರಿನ ಜನರು ನನ್ನಿಂದ ನಿರೀಕ್ಷಿಸುತ್ತಿರುವುದಾಗಿ ತಿಳಿಸಿದರು.

ಹಣ ಮಾಡಲು ಅಥವಾ ಪ್ರತಿಷ್ಠೆಗಾಗಿ ರಾಜಕೀಯಕ್ಕೆ ಬರುತ್ತಿಲ್ಲ, ಜನರ ಪರವಾಗಿ ಧ್ವನಿ ಎತ್ತಲು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಸಾಮಾನ್ಯ ಕುಟುಂಬದಿಂದ ಬಂದಂತವರು ಕಾಂಗ್ರೆಸ್ ಪಕ್ಷದಲ್ಲಿರುವುದರಿಂದ ತಾವು ಕೂಡಾ ಆ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ಹೇಳಿದರು.

ಮೂಸೆವಾಲಾ ಪಕ್ಷ ಸೇರ್ಪಡೆ ರಾಜ್ಯದ ರಾಜಕೀಯದಲ್ಲಿ ದೊಡ್ಡ ದಿನವಾಗಿದೆ ಎಂದು ಮುಖ್ಯಮಂತ್ರಿ ಚನ್ನಿ ಹೇಳಿದರು. ಮೂಸೆವಾಲಾ ಚುನಾವಣೆಯಲ್ಲಿ ನಮ್ಮ ಪರವಾಗಿ ಹೋರಾಟ ನಡೆಸಲಿದ್ದಾರೆ ಎಂದು ನವಜೋತ್ ಸಿಂಗ್ ಸಿಧು ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com