ಜಮ್ಮು-ಕಾಶ್ಮೀರದ ಬುದ್ಗಾಮ್ ನಲ್ಲಿ ಎಲ್ ಇಟಿ ಉಗ್ರನ ಬಂಧನ: ಶಸಾಸ್ತ್ರ ವಶ 

ಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಲಷ್ಕರ್ -ಇ- ತೊಯ್ಬಾ ಸಂಘಟನೆಯ ಉಗ್ರನೊಬ್ಬನನ್ನು ಭದ್ರತಾ ಪಡೆಗಳು ಬಂಧಿಸಿದ್ದು, ಆತನಿಂದ ಶಸಾಸ್ತ್ರಗಳನ್ನು ವಶ ಪಡಿಸಿಕೊಂಡಿವೆ ಎಂದು ಪೊಲೀಸರು ಶನಿವಾರ ಹೇಳಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬುದ್ಗಾಮ್: ಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಲಷ್ಕರ್ -ಇ- ತೊಯ್ಬಾ ಸಂಘಟನೆಯ ಉಗ್ರನೊಬ್ಬನನ್ನು ಭದ್ರತಾ ಪಡೆಗಳು ಬಂಧಿಸಿದ್ದು, ಆತನಿಂದ ಶಸಾಸ್ತ್ರಗಳನ್ನು ವಶ ಪಡಿಸಿಕೊಂಡಿವೆ ಎಂದು ಪೊಲೀಸರು ಶನಿವಾರ ಹೇಳಿದ್ದಾರೆ. 

ಬುದ್ಗಾಮ್ ನ ಪೊಸ್ಕರ್ ಪ್ರದೇಶದಲ್ಲಿ ಉಗ್ರರ ಚಲನವಲನ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸಿಆರ್ ಪಿಎಫ್ ನೊಂದಿಗೆ ಪೊಲೀಸರು ಜಂಟಿ ಶೋಧ ಕಾರ್ಯಾಚರಣೆ ನಡೆಸಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಶೋಧ ಕಾರ್ಯಾಚರಣೆ ವೇಳೆ, ಎಲ್ ಇಟಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಉಗ್ರನೊಬ್ಬನನ್ನು ಜಂಟಿ ತಂಡ ಬಂಧಿಸಿದೆ. ಆತನನ್ನು ಬುದ್ಗಾಮ್ ನ  ಪೇತ್ಜಾನಿಗಮ್ ಬೀರ್ವಾಹ್ ನ ನಿವಾಸಿ ಎಬಿ ಹಮೀದ್ ನಾಥ್ ಎಂದು ಗುರುತಿಸಲಾಗಿದೆ.

ಬಂಧಿತನಿಂದ ಒಂದು ಪಿಸ್ತೂಲ್, ಮ್ಯಾಗ್ ಜೀನ್, ಒಂದು ಚೀನಾದ ಗ್ರೆನೇಡ್ ವಶಕ್ಕೆ ಪಡೆಯಲಾಗಿದೆ. ಪೊಲೀಸ ದಾಖಲೆ ಪ್ರಕಾರ, ಆತನ 2021 ಫೆಬ್ರವರಿಯಿಂದ ಉಗ್ರ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಎನ್ನಲಾಗಿದೆ. ಆತನ ವಿರುದ್ಧ ವಿವಿಧ ಸೆಕ್ಷನ್ ಗಳಡಿ ಕೇಸ್ ದಾಖಲಾಗಿದೆ. ಈ ಸಂಬಂಧ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com