ಕೋವಿಡ್ ಲಸಿಕೆ ಅಭಿಯಾನ ಆರಂಭವಾಗಿ 10 ತಿಂಗಳ ನಂತರ ಮೊದಲ ಡೋಸ್ ಪಡೆದ ಮಹಾರಾಷ್ಟ್ರದ ಹಂಗಾಮಿ ಮುಖ್ಯ ಕಾರ್ಯದರ್ಶಿ!

ದೇಶದಲ್ಲಿ ಕೋವಿಡ್-19 ಲಸಿಕೆ ಅಭಿಯಾನ ಪ್ರಾರಂಭವಾದ 10 ತಿಂಗಳ ನಂತರ, ಮಹಾರಾಷ್ಟ್ರದ ಹಂಗಾಮಿ ಮುಖ್ಯ ಕಾರ್ಯದರ್ಶಿ ದೇಬಶಿಶ್ ಚಕ್ರವರ್ತಿ ಅವರು ಲಸಿಕೆಯ ಮೊದಲ ಡೋಸ್ ತೆಗೆದುಕೊಂಡಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬೈ: ದೇಶದಲ್ಲಿ ಕೋವಿಡ್-19 ಲಸಿಕೆ ಅಭಿಯಾನ ಪ್ರಾರಂಭವಾದ 10 ತಿಂಗಳ ನಂತರ, ಮಹಾರಾಷ್ಟ್ರದ ಹಂಗಾಮಿ ಮುಖ್ಯ ಕಾರ್ಯದರ್ಶಿ ದೇಬಶಿಶ್ ಚಕ್ರವರ್ತಿ ಅವರು ಲಸಿಕೆಯ ಮೊದಲ ಡೋಸ್ ತೆಗೆದುಕೊಂಡಿದ್ದಾರೆ ಎಂದು ವೈದ್ಯಕೀಯ ಅಧಿಕಾರಿ ಶನಿವಾರ ತಿಳಿಸಿದ್ದಾರೆ.

59 ವರ್ಷದ ಹಿರಿಯ ಅಧಿಕಾರಿಗೆ ಗುರುವಾರ ಮೊದಲ ಡೋಸ್ ಲಸಿಕೆ ನೀಡಲಾಗಿದೆ.

ವ್ಯಾಕ್ಸಿನೇಷನ್ ಡ್ರೈವ್ ಪ್ರಾರಂಭವಾದ ತಿಂಗಳುಗಳ ನಂತರ ಲಸಿಕೆ ತೆಗೆದುಕೊಂಡಿರುವ ಕ್ರಮವನ್ನು ಚಕ್ರವರ್ತಿ ಅವರು ಸಮರ್ಥಿಸಿಕೊಂಡಿದ್ದು, ಲಸಿಕೆ ಬಗ್ಗೆ ತನಗೆ ಯಾವುದೇ ದ್ವೇಷವಿಲ್ಲದಿದ್ದರೂ, ಇದು ಅವರ ವೈಯಕ್ತಿಕ ನಿರ್ಧಾರ ಮತ್ತು ಅವರು ಬಯಸಿದಾಗ ಲಸಿಕೆ ತೆಗೆದುಕೊಳ್ಳಬಹುದು ಹೇಳಿರುವುದಾಗಿ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ.

ಡಿಸೆಂಬರ್ 22 ರಿಂದ ಪ್ರಾರಂಭವಾಗಲಿರುವ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನವನ್ನು ಗಮನದಲ್ಲಿಟ್ಟುಕೊಂಡು ಹಿರಿಯ ಐಎಎಸ್ ಅಧಿಕಾರಿ ಲಸಿಕೆ ಹಾಕಿಸಿಕೊಂಡಿದ್ದಾರೆ ಎಂದು ವೈದ್ಯಕೀಯ ಅಧಿಕಾರಿ ಹೇಳಿದ್ದಾರೆ.

ಮಹಾರಾಷ್ಟ್ರ ಸರ್ಕಾರ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಡೋಸ್ ಲಸಿಕೆ ಕಡ್ಡಾಯಗೊಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com