ಒಂದೇ ದಿನದಲ್ಲಿ 1 ಕೋಟಿಗೂ ಹೆಚ್ಚು ಡೋಸ್ ಕೊರೊನಾ ಲಸಿಕೆ ಹಂಚಿಕೆ: ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಸಂತಸ

ಶನಿವಾರ ಒಂದೇ ದಿನದಲ್ಲಿ ಭಾರತ 1 ಕೋಟಿಗೂ ಹೆಚ್ಚು ಡೋಸ್ ಗಳ ಕೊರೊನಾ ಲಸಿಕೆ ಹಂಚಿಕೆ ಮಾಡಿದೆ. ಇದರೊಂದಿಗೆ ಭಾರತ ಒಟ್ಟು 127.5 ಕೋಟಿ ಡೋಸ್ ಕೊರೊನಾ ಲಸಿಕೆ ನೀಡಿದಂತಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಶನಿವಾರ ಒಂದೇ ದಿನದಲ್ಲಿ ಭಾರತ 1 ಕೋಟಿಗೂ ಹೆಚ್ಚು ಡೋಸ್ ಗಳ ಕೊರೊನಾ ಲಸಿಕೆ ಹಂಚಿಕೆ ಮಾಡಿದೆ. ಇದರೊಂದಿಗೆ ಭಾರತ 127.5 ಕೋಟಿ ಡೋಸ್ ಕೊರೊನಾ ಲಸಿಕೆ ನೀಡಿದಂತಾಗಿದೆ. 

ಇದುವರೆಗೂ ಭಾರತದಲ್ಲಿ 4 ಒಮಿಕ್ರಾನ್ ಸೋಂಕಿತರು ಪತ್ತೆಯಾಗಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗುತ್ತಿದೆ. ದ. ಆಫ್ರಿಕಾದಲ್ಲಿ ಒಮಿಕ್ರಾನ್ ವೈರಾಣು ಪತ್ತೆಯಾದ ದಿನದಿಂದ ಕೊರೊನಾ ಲಸಿಕೆ ಹಂಚಿಕೆ ವೇಗ ಪಡೆದುಕೊಂಡಿದೆ.

ಭಾರತ ಎರಡು ತಿಂಗಳ ಹಿಂದೆ ಒಂದೇ ದಿನದಲ್ಲಿ 1 ಕೋಟಿಗೂ ಹೆಚ್ಚು ಲಸಿಕೆ ನೀಡಿದ ಹೆಸರಿಗೆ ಪಾತ್ರವಾಗಿತ್ತು. ಇದೀಗ ಮತ್ತೆ 1 ಕೋಟಿ ಡೋಸ್ ಲಸಿಕೆ ಪೂರೈಸಿರುವುದನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com