ಘೋರ ಘಟನೆ: ಪತಿಯೊಂದಿಗೆ ನಿತ್ಯ ಜಗಳದಿಂದ ಮನನೊಂದು ಐವರು ಪುತ್ರಿಯರೊಂದಿಗೆ ಬಾವಿಗೆ ಹಾರಿದ ತಾಯಿ!
ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು ತನ್ನ 5 ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿದ್ದು ಘಟನೆಯಲ್ಲಿ ಎಲ್ಲರೂ ಸಾವನ್ನಪ್ಪಿದ್ದಾರೆ.
Published: 05th December 2021 05:19 PM | Last Updated: 05th December 2021 05:27 PM | A+A A-

ಪ್ರತ್ಯಕ್ಷ ದೃಶ್ಯ
ಕೋಟಾ(ರಾಜಸ್ಥಾನ): ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು ತನ್ನ 5 ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿದ್ದು ಘಟನೆಯಲ್ಲಿ ಎಲ್ಲರೂ ಸಾವನ್ನಪ್ಪಿದ್ದಾರೆ.
ಪತಿಯೊಂದಿಗೆ ದಿನನಿತ್ಯದ ಜಗಳದಿಂದ ಮಹಿಳೆ ಬೇಸತ್ತಿದ್ದಳು ಎಂದು ಹೇಳಲಾಗುತ್ತಿದೆ. ಮೃತ ಮಹಿಳೆಯನ್ನು ಕಲಿಯಾಹೆಡಿ ಗ್ರಾಮದ ನಿವಾಸಿ ಶಿವಲಾಲ್ ಬಂಜಾರ ಪತ್ನಿ ಬದ್ಮಾದೇವಿ ಎಂದು ಗುರುತಿಸಲಾಗಿದೆ. ಮಹಿಳೆ ತನ್ನ ಅಪ್ರಾಪ್ತ ಐವರು ಹೆಣ್ಣುಮಕ್ಕಳ ಜೊತೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಾವಿತ್ರಿ (14), ಅಂಕಲಿ (8), ಕಾಜಲ್ (6), ಗುಂಜನ್ (4) ಮತ್ತು ಒಂದು ವರ್ಷದ ಅರ್ಚನಾ ಮೃತ ಐವರು ಅಪ್ರಾಪ್ತ ಬಾಲಕಿಯರು. ಪತಿ ಸಂಬಂಧಿಕರೊಬ್ಬರ ಸಂತಾಪ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದಾಗಿ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂದು ಬೆಳಗ್ಗೆ ಗ್ರಾಮಸ್ಥರು ಆರು ಶವಗಳನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದರು. ನಂತರ ಮೃತದೇಹಗಳನ್ನು ಬಾವಿಯಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಮಹಿಳೆಯ ಪತಿ ಮಧ್ಯಾಹ್ನ ಹೊರಗೆ ಹೋಗಿದ್ದು, ಸಂಜೆಯಾದರೂ ಮನೆಗೆ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮಧ್ಯೆ ರಾತ್ರಿ ಮಹಿಳೆ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಿಳೆಯ ಮನೆಯಿಂದ ಕೇವಲ 100 ಮೀಟರ್ ದೂರದಲ್ಲಿ ಬಾವಿ ಇದೆ. ಬಾದಾಮಿ ದೇವಿ ಬಾವಿಗೆ ಹಾರಿದಾಗ ಆಕೆಯ ಇಬ್ಬರು ಹೆಣ್ಣು ಮಕ್ಕಳು ಮಲಗಿದ್ದರು ಎನ್ನಲಾಗಿದೆ. ಇದರಿಂದಾಗಿ ಇಬ್ಬರ ಪ್ರಾಣ ಉಳಿಯಿತು. ಪ್ರಾಥಮಿಕ ತನಿಖೆಯಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆ ಈ ಕ್ರಮ ಕೈಗೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.