ಗೋವಾದಲ್ಲಿ ಆಪ್ ಅಧಿಕಾರಕ್ಕೆ ಬಂದರೆ ಭರ್ಜರಿ ಆಫರ್ ಘೋಷಿಸಿದ ಕೇಜ್ರಿವಾಲ್!

ಆಮ್ ಆದ್ಮಿ ಪಕ್ಷ ಗೋವಾದಲ್ಲಿ ಅಧಿಕಾರಕ್ಕೆ ಬಂದಲ್ಲಿ 18 ವರ್ಷದ ಮೇಲ್ಪಟ್ಟ ಮಹಿಳೆಯರಿಗೆ ಪ್ರತಿ ತಿಂಗಳೂ 1,000 ರೂಪಾಯಿ ನೀಡುವುದಾಗಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ಆರವಿಂದ್ ಕೇಜ್ರಿವಾಲ್
ಆರವಿಂದ್ ಕೇಜ್ರಿವಾಲ್

ಪಣಜಿ: ಆಮ್ ಆದ್ಮಿ ಪಕ್ಷ ಗೋವಾದಲ್ಲಿ ಅಧಿಕಾರಕ್ಕೆ ಬಂದಲ್ಲಿ 18 ವರ್ಷದ ಮೇಲ್ಪಟ್ಟ ಮಹಿಳೆಯರಿಗೆ ಪ್ರತಿ ತಿಂಗಳೂ 1,000 ರೂಪಾಯಿ ನೀಡುವುದಾಗಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
 
ಗೋವಾದಲ್ಲಿ 2022 ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಆಮ್ ಆದ್ಮಿ ಪಕ್ಷ ಅಲ್ಲಿ ಅಧಿಕಾರ ಹಿಡಿಯಲು ಯತ್ನಿಸುತ್ತಿದೆ. 

ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಕೇಜ್ರಿವಾಲ್, ಮಹಿಳೆಯರಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದು, ಗೃಹ ಆಧಾರ್ ಫಲಾನುಭವಿಗಳಿಗೆ ಪ್ರತಿ ತಿಂಗಳು ನೀಡಲಾಗುತ್ತಿರುವ ಮೊತ್ತವನ್ನು 1,500 ರಿಂದ 2,500 ಕ್ಕೆ ಏರಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. 

18 ವರ್ಷದ ಮೇಲ್ಪಟ್ಟ ಪ್ರತಿ ಮಹಿಳೆಯರಿಗೂ ಮಾಸಿಕ 1,000 ರೂಪಾಯಿಗಳನ್ನು ನೀಡಲಾಗುತ್ತದೆ ಇದು ವಿಶ್ವದಲ್ಲೇ ಅತಿ ದೊಡ್ಡ ಹಾಗೂ ಅತ್ಯಂತ ಪರಿಣಾಮಕಾರಿಯಾದ ಮಹಿಳಾ ಸಬಲೀಕರಣ ಯೋಜನೆಯಾಗಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. 

ಕೆಲವರು ಹೇಳುತ್ತಾರೆ ಕೇಜ್ರಿವಾಲ್ ಉಚಿತವಾಗಿ ಹಣವನ್ನು ನೀಡುತ್ತಿದ್ದಾರೆ ಎಂದು ಹೇಳುತ್ತಾರೆ. ಆದರೆ ಈವರೆಗೂ ಸಚಿವರು ಮಾತ್ರ ತೆರಿಗೆದಾರರ ಹಣದಲ್ಲಿ ಉಚಿತವಾಗಿ ಎಲ್ಲವನ್ನೂ ಪಡೆಯುತ್ತಿದ್ದರು, ನಾಯಕರು ಪಡೆಯುತ್ತಿದ್ದಾರೆ, ಆದರೆ ಈ ರೀತಿ ಉಚಿತವಾಗಿ ಪಡೆಯುವುದು ಪ್ರಜೆಗಳ ಹಕ್ಕು ಎಂದು ಅವರು ತಿಳಿಸಿದ್ದಾರೆ. ಆಮ್ ಆದ್ಮಿ ಪಕ್ಷ ಗೋವಾದ ಎಲ್ಲಾ 40 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವ ಘೋಷಣೆ ಮಾಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com