ವಿಮಾನ ನಿಲ್ದಾಣದಲ್ಲಿ ತಪಾಸಣೆ
ವಿಮಾನ ನಿಲ್ದಾಣದಲ್ಲಿ ತಪಾಸಣೆ

ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 21ಕ್ಕೆ ಏರಿಕೆ: ದೆಹಲಿ ಮತ್ತು ರಾಜಸ್ಥಾನದಲ್ಲಿ ಮೊದಲ ಪ್ರಕರಣ ದಾಖಲು

ಹೈ ರಿಸ್ಕ್ ಇರುವ ದೇಶಗಳಿಂದ ಭಾರತಕ್ಕೆ ಆಗಮಿಸುವ ವಿಮಾನ ಪ್ರಯಾಣಿಕರಿಗೆ ಆರ್ ಟಿ ಪಿ ಸಿ ಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಪರೀಕ್ಷೆಯ ಫಲಿತಾಂಶ ಬರದೇ ಆ ಪ್ರಯಾಣಿಕರು ವಿಮಾನ ನಿಲ್ದಾಣದಿಂದ ಹೊರಕ್ಕೆ ಕಾಲಿಡುವಂತಿಲ್ಲ.

ನವದೆಹಲಿ: ಭಾನುವಾರ ಒಂದೇ ದಿನ 17 ಒಮಿಕ್ರಾನ್ ಪತ್ತೆಯಾಗುವುದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ ೨೧ಕ್ಕೆ ಏರಿಕೆಯಾಗಿದೆ. ಪತ್ತೆಯಾದ 17 ಒಮಿಕ್ರಾನ್ ಪ್ರಕರಣಗಳಲ್ಲಿ 9 ರಾಜಸ್ಥಾನ, 7 ಮಹಾರಾಷ್ಟ್ರ ಮತ್ತು ದೆಹಲಿಗೆ ಬಂದಿಳಿದ ತಾಂಜಾನಿಯಾ ಪ್ರಜೆಗೆ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ. 

ರಾಜಸ್ಥಾನದಲ್ಲಿ ಪತ್ತೆಯಾದ ಒಮಿಕ್ರಾನ್ ಸೋಂಕಿತರ ಕುಟುಂಬ ಸದಸ್ಯರು ಇತ್ತೀಚಿಗೆ ದ.ಆಫ್ರಿಕಾದಿಂದ ಆಗಮಿಸಿದ್ದರು. ಇನ್ನು ಮಹಾರಾಷ್ಟ್ರದಲ್ಲಿ ಪತ್ತೆಯಾದ ಸೋಂಕಿತರು ಇತ್ತೀಚಿಗೆ ನೈಜೀರಿಯಾದಿಂದ ಭಾರತಕ್ಕೆ ಆಗಮಿಸಿದ್ದರು. 

ಭಾರತದಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿತ್ತು. ಇದುವರೆಗೂ ಕರ್ನಾಟಕದಲ್ಲಿ 2 ಒಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. ಸದ್ಯದ ಪರಿಸ್ಥಿತಿಯಲ್ಲಿ ಹೈ ರಿಸ್ಕ್ ಇರುವ ದೇಶಗಳಿಂದ ಭಾರತಕ್ಕೆ ಆಗಮಿಸುವ ವಿಮಾನ ಪ್ರಯಾಣಿಕರಿಗೆ ಆರ್ ಟಿ ಪಿ ಸಿ ಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಪರೀಕ್ಷೆಯ ಫಲಿತಾಂಶ ಬರದೇ ಆ ಪ್ರಯಾಣಿಕರು ವಿಮಾನ ನಿಲ್ದಾಣದಿಂದ ಹೊರಕ್ಕೆ ಕಾಲಿಡುವಂತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com