ದೆಹಲಿಯ ಜಂತರ್ ಮಂತರ್‌ನಲ್ಲಿ ಮೆಹಬೂಬಾ ಮುಫ್ತಿ ಧರಣಿ, ಕಾಶ್ಮೀರ ನೋವಿನಲ್ಲಿದೆ ಎಂದ ಮಾಜಿ ಸಿಎಂ

ಕೇಂದ್ರಾಡಳಿತ ಪ್ರದೇಶದ ಜನರ ಮೇಲಿನ ದಬ್ಬಾಳಿಕೆಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ದೆಹಲಿ ಜಂತರ್ ಮಂತರ್‌ನಲ್ಲಿ ಧರಣಿ ನಡೆಸುತ್ತಿದ್ದು, ಅಮಾಯಕರ ಹತ್ಯೆಯನ್ನು ತಕ್ಷಣವೇ
ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ

ನವದೆಹಲಿ: ಕೇಂದ್ರಾಡಳಿತ ಪ್ರದೇಶದ ಜನರ ಮೇಲಿನ ದಬ್ಬಾಳಿಕೆಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ದೆಹಲಿ ಜಂತರ್ ಮಂತರ್‌ನಲ್ಲಿ ಧರಣಿ ನಡೆಸುತ್ತಿದ್ದು, ಅಮಾಯಕರ ಹತ್ಯೆಯನ್ನು ತಕ್ಷಣವೇ ನಿಲ್ಲಿಸಬೇಕೆಂದು ಸೋಮವಾರ ಒತ್ತಾಯಿಸಿದ್ದಾರೆ.

ಕಾಶ್ಮೀರದಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನೀಡದ ಕಾರಣ ರಾಷ್ಟ್ರ ರಾಜಧಾನಿಯಲ್ಲಿ ಧರಣಿ ನಡೆಸಲು ನಿರ್ಧರಿಸಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಅಧ್ಯಕ್ಷೆ ಮುಫ್ತಿ ಅವರು ಹೇಳಿದ್ದಾರೆ.

ಪ್ರತಿ ಬಾರಿಯೂ ನಾನು ಪ್ರತಿಭಟನೆ ನಡೆಸಲು ಮುಂದಾದಾಗ ನನ್ನ ಮನೆಯಲ್ಲಿಯೇ ಪೊಲೀಸರು ನನ್ನನ್ನು ಬಂಧಿಸುತ್ತಿದ್ದರು ಎಂದು ಮಾಜಿ ಸಿಎಂ ತಿಳಿಸಿದ್ದಾರೆ.

"ಕಾಶ್ಮೀರ ಜನರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಅವಕಾಶ ನೀಡದಿರುವುದರಿಂದ ಇಡೀ ಕಣಿವೆವೇ ಜೈಲು ಆಗಿ ಮಾರ್ಪಟ್ಟಿದೆ. ಆಗಸ್ಟ್ 2019 ರಿಂದ ಅವರ ಮೇಲೆ ದಬ್ಬಾಳಿಕೆ ಮಾಡಲಾಗುತ್ತಿದೆ” ಎಂದು ಮೆಹಬೂಬಾ ಮುಫ್ತಿ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಿಡಿಪಿಯ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com