ಮನಿ ಲಾಂಡರಿಂಗ್ ಪ್ರಕರಣ: ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಇಡಿ ಸಮನ್ಸ್

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ ಸಮನ್ಸ್ ಜಾರಿ ಮಾಡಿದ್ದು, ಡಿಸೆಂಬರ್ 8ರಂದು ವಿಚಾರಣೆಗೆ ಹಾಜರಾಗುವಂತೆ
ಜಾಕ್ವೆಲಿನ್ ಫರ್ನಾಂಡಿಸ್
ಜಾಕ್ವೆಲಿನ್ ಫರ್ನಾಂಡಿಸ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ ಸಮನ್ಸ್ ಜಾರಿ ಮಾಡಿದ್ದು, ಡಿಸೆಂಬರ್ 8ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಅವರ ಹೆಸರು ಕೇಳಿಬಂದಿದ್ದು, ಈ ಪ್ರಕರಣದ ಪ್ರಮುಖ ರೂವಾರಿ ಸುಕೇಶ್‌ ಚಂದ್ರಶೇಖರ್‌ ಜೊತೆಗೆ ಜಾಕ್ವೆಲಿನ್ ಹೆಸರು ತಳುಕು ಹಾಕಿಕೊಂಡಿದೆ. ಆ ಹಿನ್ನೆಲೆಯಲ್ಲಿ ಈಗಾಗಲೇ ಒಮ್ಮೆ ಜಾರಿ ನಿರ್ದೇಶನಾಲಯವು ಜಾಕ್ವೆಲಿನ್‌ಗೆ ನೋಟಿಸ್‌ ಕೂಡ ನೀಡಿತ್ತು. ಅಲ್ಲದೆ ನಿನ್ನೆ ಭಾರತ ಬಿಟ್ಟು ಹೊಗದಂತೆ ಬಾಲಿವುಡ್ ನಟಿಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದ ಇಡಿ, ಇಂದು ಸಮನ್ಸ್ ಜಾರಿ ಮಾಡಿದೆ.

200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಸುಖೇಶ್ ಚಂದ್ರಶೇಖರ್ ಜೊತೆ ನಟಿ ಜಾಕ್ವೆಲಿನ್ ​​ ಹೆಸರು ತಳುಕು ಹಾಕಿಕೊಂಡಿದೆ. ಕಳೆದ ಒಂದು ವಾರದಿಂದ ಸುಖೇಶ್​ ಹಾಗೂ ಜಾಕ್ವೆಲಿನ್ ​​ ವೈಯಕ್ತಿಯ ಫೋಟೋಗಳು ಎನ್ನಲಾದ ಫೋಟೋಗಳು ಸಾಕಷ್ಟು ಸುದ್ದಿ ಮಾಡಿದ್ದವು.

ಇನ್ನು ಶ್ರೀಲಂಕಾ ಮೂಲದ ಜಾಕ್ವೆಲಿನ್​​ ಅವರಿಗೆ ಚಂದ್ರಶೇಖರ್ ₹ 10 ಕೋಟಿ ಮೌಲ್ಯದ ವಸ್ತುಗಳನ್ನು ಉಡುಗೊರೆಯಾಗಿ ನೀಡಿರುವುದು ಬಯಲಾಗಿದೆ. ಇದರಲ್ಲಿ ₹ 52 ಲಕ್ಷ ಮೌಲ್ಯದ ಕುದುರೆ ಮತ್ತು ₹ 9 ಲಕ್ಷ ಮೌಲ್ಯದ ಪರ್ಷಿಯನ್ ಬೆಕ್ಕು ಸೇರಿವೆ ಎಂದು ಇಡಿ ತನ್ನ ಚಾರ್ಜ್‌ಶೀಟ್‌ನಲ್ಲಿ ತಿಳಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com