ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಭಾರತಕ್ಕೆ ಆಗಮನ, 21ನೇ ವಾರ್ಷಿಕ ಭಾರತ-ರಷ್ಯಾ ಶೃಂಗಸಭೆಯಲ್ಲಿ ಭಾಗಿ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಸೋಮವಾರ ಭಾರತಕ್ಕೆ ಆಗಮಿಸಲಿದ್ದು 21ನೇ ವಾರ್ಷಿಕ ಭಾರತ-ರಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಅವರನ್ನು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಲಿದ್ದಾರೆ.
ನರೇಂದ್ರ ಮೋದಿ-ವ್ಲಾಡಿಮಿರ್ ಪುಟಿನ್(ಸಂಗ್ರಹ ಚಿತ್ರ)
ನರೇಂದ್ರ ಮೋದಿ-ವ್ಲಾಡಿಮಿರ್ ಪುಟಿನ್(ಸಂಗ್ರಹ ಚಿತ್ರ)

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಸೋಮವಾರ ಭಾರತಕ್ಕೆ ಆಗಮಿಸಲಿದ್ದು 21ನೇ ವಾರ್ಷಿಕ ಭಾರತ-ರಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಅವರನ್ನು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಲಿದ್ದಾರೆ.

ಉಭಯ ನಾಯಕರ ಭೇಟಿ, ಮಾತುಕತೆ ಸಂದರ್ಭದಲ್ಲಿ ಎರಡೂ ದೇಶಗಳು 10ಕ್ಕೂ ಹೆಚ್ಚು ಒಪ್ಪಂದಗಳಿಗೆ ಶೃಂಗಸಭೆಯ ನಂತರ ಸಹಿ ಹಾಕುವ ನಿರೀಕ್ಷೆಯಿದೆ. ಅಂತರಿಕ್ಷ, ಸಂಸ್ಕೃತಿ, ವಿಜ್ಞಾನ ಮತ್ತು ತಂತ್ರಜ್ಞಾನ, ರಕ್ಷಣಾ ಕ್ಷೇತ್ರಗಳಿಗೆ ಸಂಬಂಧಿಸಿದ ಮಹತ್ವದ ಒಪ್ಪಂದಗಳಿಗೆ ಉಭಯ ನಾಯಕರು ಸಹಿ ಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ. 

2+2 ಮಾತುಕತೆ: ರಷ್ಯಾ ಅಧ್ಯಕ್ಷರ ಜೊತೆ ಅಲ್ಲಿನ ವಿದೇಶಾಂಗ ಮತ್ತು ರಕ್ಷಣಾ ಸಚಿವರು ಕೂಡ ಇಂದು ಭಾರತಕ್ಕೆ ಬರುತ್ತಿದ್ದು ಇಲ್ಲಿನ ವಿದೇಶಾಂಗ ಮಂತ್ರಿ ಎಸ್ ಜೈಶಂಕರ್ ಹಾಗೂ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರ ಜೊತೆ 2+2 ಮಾತುಕತೆ ಏರ್ಪಡಲಿದೆ. 

ಇಂದು ನಡೆಯಲಿರುವ 2+2 ಮಾತುಕತೆಯಲ್ಲಿ ಭಾರತ ಮತ್ತು ರಷ್ಯಾ ದೇಶಗಳ ಸಚಿವರು ದ್ವಿಪಕ್ಷೀಯ, ಸ್ಥಳೀಯ ಮತ್ತು ಅಂತಾರಾಷ್ಟ್ರೀಯ ವಿಷಯಗಳಿಗೆ ಒತ್ತು ನೀಡಲಿದ್ದಾರೆ. ಆಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡ ನಂತರ ಅಲ್ಲಿನ ಪರಿಸ್ಥಿತಿ, ಬೆಳವಣಿಗೆಗಳ ಬಗ್ಗೆ ಕೂಡ ಚರ್ಚೆ ನಡೆಯಲಿದೆ. ಉಗ್ರ ಸಂಘಟನೆಗಳಿಂದ ದೇಶದ ನಾಗರಿಕರಿಕರಿಗೆ ಬೆದರಿಕೆಗಳಿವೆಯೇ ಎಂಬುದನ್ನು ನಾಯಕರು ಚರ್ಚಿಸಲಿದ್ದಾರೆ. ಆಫ್ಘಾನಿಸ್ತಾನದಲ್ಲಿ ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ಮಕ್ಕಳ ಮಾನವ ಹಕ್ಕು ರಕ್ಷಣೆಗಳ ಬಗ್ಗೆ ಕೂಡ ಚರ್ಚೆ ನಡೆಯಲಿವೆ ಎಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com