ಮಹಾರಾಷ್ಟ್ರದ 12 ಬಿಜೆಪಿ ಶಾಸಕರ ಒಂದು ವರ್ಷ ಅಮಾನತು ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಅಸ್ತು

ಸಭಾಧ್ಯಕ್ಷರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ರಾಜ್ಯ ವಿಧಾನಸಭೆಯಿಂದ 12 ಬಿಜೆಪಿ ಶಾಸಕರನ್ನು ಒಂದು ವರ್ಷ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಪ್ರತಿಪಕ್ಷ ಶಾಸಕರು ಸಲ್ಲಿಸಿರುವ ಅರ್ಜಿ ವಿಚಾರಣೆಗೆ ನಡೆಸಲು ಸುಪ್ರೀಂ...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಸಭಾಧ್ಯಕ್ಷರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ರಾಜ್ಯ ವಿಧಾನಸಭೆಯಿಂದ 12 ಬಿಜೆಪಿ ಶಾಸಕರನ್ನು ಒಂದು ವರ್ಷ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಪ್ರತಿಪಕ್ಷ ಶಾಸಕರು ಸಲ್ಲಿಸಿರುವ ಅರ್ಜಿ ವಿಚಾರಣೆಗೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿಸಿದೆ.

ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಸಾಧ್ಯತೆಯಿದೆ ಮತ್ತು ಶಾಸಕರ ಅಮಾನತು ವಿರುದ್ಧದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ನ್ಯಾಯಪೀಠಕ್ಕೆ ವಕೀಲ ಸಿದ್ಧಾರ್ಥ್ ಧರ್ಮಾಧಿಕಾರಿ ತಿಳಿಸಿದರು.

"ಸರಿ, ನಾವು ದಿನಾಂಕವನ್ನು(ವಿಚಾರಣೆಗಾಗಿ) ನೀಡುತ್ತೇವೆ" ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಹೇಳಿದೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ವಿಕಾಸ್ ಅಘಾಡಿ ಸರ್ಕಾರವು ಡಿಸೆಂಬರ್ 22 ಮತ್ತು 28 ರ ನಡುವೆ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಸಲಿದೆ.

ಜುಲೈ 22 ರಂದು 12 ಬಿಜೆಪಿ ಶಾಸಕರು ತಮ್ಮನ್ನು ಒಂದು ವರ್ಷ ಅಮಾನತುಗೊಳಿಸುವ ನಿರ್ಣಯವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.

ಸಭಾಧ್ಯಕ್ಷರ ಚೇಂಬರ್‌ನಲ್ಲಿ ಸಭಾಧ್ಯಕ್ಷ ಭಾಸ್ಕರ್ ಜಾಧವ್ ಅವರೊಂದಿಗೆ ಬಿಜೆಪಿ ಶಾಸಕರು ಅನುಚಿತವಾಗಿ ವರ್ತಿಸಿದ್ದಾರೆ ಎಂದು ರಾಜ್ಯ ಸರ್ಕಾರ ಆರೋಪಿಸಿದ ನಂತರ ಜುಲೈ 5 ರಂದು ಅವರನ್ನು ವಿಧಾನಸಭೆಯಿಂದ ಅಮಾನತುಗೊಳಿಸಲಾಯಿತು.

12 ಅಮಾನತುಗೊಂಡ ಶಾಸಕರು- ಸಂಜಯ್ ಕುಟೆ, ಆಶಿಶ್ ಶೆಲಾರ್, ಅಭಿಮನ್ಯು ಪವಾರ್, ಗಿರೀಶ್ ಮಹಾಜನ್, ಅತುಲ್ ಭಟ್ಖಾಲ್ಕರ್, ಪರಾಗ್ ಅಲವಾನಿ, ಹರೀಶ್ ಪಿಂಪಲೆ, ಯೋಗೇಶ್ ಸಾಗರ್, ಜಯ್ ಕುಮಾರ್ ರಾವತ್, ನಾರಾಯಣ ಕುಚೆ, ರಾಮ್ ಸತ್ಪುಟೆ ಮತ್ತು ಬಂಟಿ ಭಂಗ್ಡಿಯಾ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com