ಛತ್ತೀಸ್‌ಗಢ: 16 ವರ್ಷದ ವಿದ್ಯಾರ್ಥಿನಿ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕನಿಂದ ಅತ್ಯಾಚಾರ; ಆರೋಪಿ ಬಂಧನ
ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಶಿಕ್ಷಕಿಯೊಬ್ಬರು 16 ವರ್ಷದ ವಿದ್ಯಾರ್ಥಿನಿಯನ್ನು ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯುವ ನೆಪದಲ್ಲಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Published: 07th December 2021 09:16 PM | Last Updated: 07th December 2021 09:16 PM | A+A A-

ಸಂಗ್ರಹ ಚಿತ್ರ
ರಾಜಾನಂದಗಾಂವ್: ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಶಿಕ್ಷಕಿಯೊಬ್ಬರು 16 ವರ್ಷದ ವಿದ್ಯಾರ್ಥಿನಿಯನ್ನು ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯುವ ನೆಪದಲ್ಲಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
11ನೇ ತರಗತಿಯ ವಿದ್ಯಾರ್ಥಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮಂಗಳವಾರ ಡೊಂಗರಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೂರಿನ ಪ್ರಕಾರ, ಡಿಸೆಂಬರ್ 2ರಂದು ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯುವ ನೆಪದಲ್ಲಿ ಆರೋಪಿಯು ಸಂತ್ರಸ್ತೆಯ ಪೋಷಕರಿಗೆ ತಿಳಿಸದೆ ಶಾಲೆಯಿಂದ ಬಲವಂತವಾಗಿ ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿದ್ದ. ಆರೋಪಿಯು ಬಾಲಕಿಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಘಟನೆಯ ಬಗ್ಗೆ ಯಾರೊಂದಿಗಾದರೂ ಹೇಳಿದರೆ ಬಾಲಕಿಯ ಅಕ್ಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವುದಾಗಿ ಶಿಕ್ಷಕ ಬೆದರಿಕೆ ಹಾಕಿದ್ದಾನೆ ಎಂದು ಅವರು ಹೇಳಿದರು.
ಸೋಮವಾರ ಹಲ್ಲೆಯ ವಿಷಯ ತಿಳಿದ ಸಂತ್ರಸ್ತೆಯ ಪೋಷಕರು ಮತ್ತು ಕೆಲವು ಸ್ಥಳೀಯರು ಪೊಲೀಸ್ ಠಾಣೆಗೆ ಆಗಮಿಸಿ ದೂರು ದಾಖಲಿಸಿದ್ದಾರೆ ಎಂದು ಅವರು ಹೇಳಿದರು.
ಆರೋಪಿ ಶಿಕ್ಷಕನ ವಿರುದ್ಧ ಐಪಿಸಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯಡಿ ಅತ್ಯಾಚಾರದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.