ಓಮಿಕ್ರಾನ್ ಭೀತಿ ನಡುವೆಯೇ ಕೊರೋನಾ ಏರಿಳಿತ: ರಾಜ್ಯದಲ್ಲಿ ಇಂದು 299 ಹೊಸ ಪ್ರಕರಣ, 6 ಸಾವು ವರದಿ

ಜಗತ್ತಿನಾದ್ಯಂತ ಓಮಿಕ್ರಾನ್ ರೂಪಾಂತರ ಭೀತಿ ನಡುವಲ್ಲೇ ರಾಜ್ಯದಲ್ಲಿ ಕೋವಿಡ್ ಸೋಂಕಿನ ಏರಿಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 299 ಹೊಸ ಸೋಂಕು ಪ್ರಕರಣಗಳು ಹಾಗೂ 6 ಸಾವು ವರದಿಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಜಗತ್ತಿನಾದ್ಯಂತ ಓಮಿಕ್ರಾನ್ ರೂಪಾಂತರ ಭೀತಿ ನಡುವಲ್ಲೇ ರಾಜ್ಯದಲ್ಲಿ ಕೋವಿಡ್ ಸೋಂಕಿನ ಏರಿಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 299 ಹೊಸ ಸೋಂಕು ಪ್ರಕರಣಗಳು ಹಾಗೂ 6 ಸಾವು ವರದಿಯಾಗಿದೆ.

ಈ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 299 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು ಆ ಮೂಲಕ ರಾಜ್ಯದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 29,98,699ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು 6 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್ ಗೆ ಬಲಿಯಾದವರ ಸಂಖ್ಯೆ ರಾಜ್ಯದಲ್ಲಿ 38243ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 260 ಮಂದಿ ಗುಣಮುಖರಾಗಿದ್ದು, ಆ ಮೂಲಕ ಕೋವಿಡ್ ನಿಂದ ಗುಣಮುಖರಾದ ಒಟ್ಟಾರೆ ಗುಣಮುಖರ ಸಂಖ್ಯೆ 2953327ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ 7100 ಸಕ್ರಿಯ ಪ್ರಕರಣಗಳಿವೆ. ದೈನಂದಿನ ಪಾಸಿಟಿವಿಟಿ ದರ 0.36ರಷ್ಟಿದೆ. ಮರಣ ಪ್ರಮಾಣ ಶೇ.2ರಷ್ಟಿದೆ.

ಇನ್ನು ಜಿಲ್ಲಾವಾರು ಪಟ್ಟಿಯಲ್ಲಿ, ಬೆಂಗಳೂರು ನಗರವೊಂದರಲ್ಲೇ 215 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ದಕ್ಷಿಣ ಕನ್ನಡದಲ್ಲಿ 14, ಕೊಡಗಿನಲ್ಲಿ 12, ಮೈಸೂರಿನಲ್ಲಿ 11 ಸೋಂಕು ಪ್ರಕರಣಗಳು ದಾಖಲಾಗಿವೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com