ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಜ.ಬಿಪಿನ್ ರಾವತ್ ಸೇರಿ 13 ಮಂದಿ ನಿಧನ: ಸ್ಥಳಕ್ಕೆ ಏರ್ ಚೀಫ್ ಮಾರ್ಷಲ್ ಭೇಟಿ 

ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಮಿಐ-17 ವಿ-5 ಸೇನಾ ಹೆಲಿಕಾಪ್ಟರ್ ಭೀಕರ ಅಪಘಾತಕ್ಕೀಡಾಗಿ ಭಾರತದ ರಕ್ಷಣಾ ಪಡೆ(CDS) ಮುಖ್ಯಸ್ಥ ಜ.ಬಿಪಿನ್ ರಾವತ್ ಸೇರಿದಂತೆ 13 ಮಂದಿ ಸಜೀವ ದಹನವಾದ ಘಟನೆ ನಡೆದ ಸ್ಥಳಕ್ಕೆ ಭಾರತೀಯ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಗುರುವಾರ ಬೆಳಗ್ಗೆ ಭೇಟಿ ನೀಡಿದ್ದಾರೆ.
ಸ್ಥಳಕ್ಕೆ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಭೇಟಿ
ಸ್ಥಳಕ್ಕೆ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಭೇಟಿ

ನೀಲಗಿರಿ(ತಮಿಳು ನಾಡು): ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಮಿಐ-17 ವಿ-5 ಸೇನಾ ಹೆಲಿಕಾಪ್ಟರ್ ಭೀಕರ ಅಪಘಾತಕ್ಕೀಡಾಗಿ ಭಾರತದ ರಕ್ಷಣಾ ಪಡೆ(CDS) ಮುಖ್ಯಸ್ಥ ಜ.ಬಿಪಿನ್ ರಾವತ್ ಸೇರಿದಂತೆ 13 ಮಂದಿ ಸಜೀವ ದಹನವಾದ ಘಟನೆ ನಡೆದ ಸ್ಥಳಕ್ಕೆ ಭಾರತೀಯ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಗುರುವಾರ ಬೆಳಗ್ಗೆ ಭೇಟಿ ನೀಡಿದ್ದಾರೆ.

ಸೇನಾ ಹೆಲಿಕಾಪ್ಟರ್ ಪತನವಾಗಿ ಧಗಧಗನೆ ದಹಿಸಿ ಹೋದ ಸ್ಥಳಕ್ಕೆ ತಮ್ಮ ಸಿಬ್ಬಂದಿಯೊಂದಿಗೆ ಭೇಟಿ ನೀಡಿದ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ತಮಿಳು ನಾಡು ರಾಜ್ಯದ ಪೊಲೀಸ್ ಮಹಾ ನಿರ್ದೇಶಕ ಸಿ ಶೈಲೇಂದ್ರ ಬಾಬು ಈ ಸಂದರ್ಭದಲ್ಲಿ ವಾಯುಪಡೆ ಮುಖ್ಯಸ್ಥರಿಗೆ ಜೊತೆಯಾಗಿದ್ದರು. 

ಬ್ಲ್ಯಾಕ್ ಬಾಕ್ಸ್ ಗಾಗಿ ಹುಡುಕಾಟ: ಪ್ರತಿಕೂಲ ಹವಾಮಾನ, ಸೇನಾ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷವೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕವಾಗಿ ಹೇಳಲಾಗುತ್ತಿದ್ದರೂ ನಿಖರ ಕಾರಣ ತಿಳಿದುಬರಬೇಕಿದೆ. ಸೇನಾ ಹೆಲಿಕಾಪ್ಟರ್ ನ ಬ್ಲ್ಯಾಕ್  ಬಾಕ್ಸ್ ಗಾಗಿ ವಿ ಆರ್ ಚೌಧರಿ ನೇತೃತ್ವದ ತಂಡ ಹುಡುಕಾಟ ನಡೆಸುತ್ತಿದೆ. 

ಹೆಲಿಕಾಪ್ಟರ್ ನಲ್ಲಿ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ಸೇರಿದಂತೆ 13 ಮಂದಿ ಸೇನಾಧಿಕಾರಿಗಳು ಮೃತಪಟ್ಟರೆ ಸೇನೆಯ ಗ್ರೂಪ್ ಕ್ಯಾಪ್ಟರ್ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ವೆಲ್ಲಿಂಗ್ಟನ್ ನ ಸೇನಾ ಆಸ್ಪತ್ರೆಯಲ್ಲಿ 13 ಮಂದಿಯ ಮೃತದೇಹಗಳಿದ್ದು, ಇಂದು ದೆಹಲಿಗೆ ಸ್ಥಳಾಂತರವಾಗಲಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com