ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 140 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಕೆ: ಕೇಂದ್ರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 140 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆ ಒದಗಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 140 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆ ಒದಗಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ತಿಳಿಸಿದೆ.

18.80 ಕೋಟಿಗೂ ಹೆಚ್ಚು ಡೋಸ್ ಬಾಕಿ ಮತ್ತು ಬಳಕೆಯಾಗದ ಲಸಿಕೆ ಇನ್ನೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

"ಭಾರತ ಸರ್ಕಾರ (ಉಚಿತ) ಮತ್ತು ನೇರ ರಾಜ್ಯಗಳ ಖರೀದಿ ವರ್ಗದ ಮೂಲಕ ಇದುವರೆಗೆ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಳಿಗೆ 140 ಕೋಟಿಗೂ ಹೆಚ್ಚು (1,40,04,00,230) ಡೋಸ್ ಲಸಿಕೆ ಒದಗಿಸಲಾಗಿದೆ.

18.80 ಕೋಟಿಗಳಿಗಿಂತ ಹೆಚ್ಚು (18,80) ,33,706) ಬಾಕಿ ಮತ್ತು ಬಳಕೆಯಾಗದ ಕೋವಿಡ್ ಲಸಿಕೆ ಡೋಸ್‌ಗಳು ಇನ್ನೂ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಬಳಿ ಲಭ್ಯವಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ದೇಶದಲ್ಲಿ ಜನವರಿ 16 ರಂದು ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದು, ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18 ರಿಂದ 45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com