ಮಹಾರಾಷ್ಟ್ರದಲ್ಲಿ 7 ಹೊಸ ಒಮಿಕ್ರಾನ್ ಪ್ರಕರಣಗಳು ಪತ್ತೆ: ಒಟ್ಟು ಸಂಖ್ಯೆ 17ಕ್ಕೆ ಏರಿಕೆ

ಪುಣೆಯಲ್ಲಿ ಪತ್ತೆಯಾದ ಒಮಿಕ್ರಾನ್ ಸೋಂಕಿತರಲ್ಲಿ ಮೂರೂವರೆ ವರ್ಷದ ಮಗು ಕೂಡಾ ಸೇರಿರುವುದು ಆತಂಕಕ್ಕೆ ಕಾರಣವಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ರೂಪಾಂತರಿ ತಳಿ ಒಮಿಕ್ರಾನ್‌ ವೈರಾಣುವಿನ 7 ಹೊಸ ಪ್ರಕರಣಗಳು ಪತ್ತೆಯಾಗಿವೆ. ಮುಂಬೈನಲ್ಲಿ 3 ಮತ್ತು ಪುಣೆಯಲ್ಲಿ 4 ಪ್ರಕರಣಗಳು. ಇದರೊಂದಿಗೆ ರಾಜ್ಯದಲ್ಲಿ ಪತ್ತೆಯಾದ ಒಮಿಕ್ರನ್ ಪ್ರಕರಣಗಳ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. 

ಮುಂಬೈನಲ್ಲಿ ಪತ್ತೆಯಾದ ಒಮಿಕ್ರಾನ್ ಸೋಂಕಿತರು ಯುಕೆ, ದಕ್ಷಿಣ ಆಫ್ರಿಕಾ ಮತ್ತು ತಾಂಜಾನಿಯಾಗೆ ಪ್ರಯಾಣಿಸಿದ್ದರು ಎಂದು ತಿಳಿದುಬಂದಿದೆ. 

ಪುಣೆಯಲ್ಲಿ ಪತ್ತೆಯಾದ ಒಮಿಕ್ರಾನ್ ಸೋಂಕಿತರಲ್ಲಿ ಮೂರೂವರೆ ವರ್ಷದ ಮಗು ಕೂಡಾ ಸೇರಿರುವುದು ಆತಂಕಕ್ಕೆ ಕಾರಣವಾಗಿದೆ. ಮುಂಬೈ, ಪುಣೆ ಮತ್ತು ನಾಗ್ಪುರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ತೀವ್ರ ಕಟ್ತೆಚ್ಚರ ವಹಿಸಲಾಗಿದ್ದು, ತಪಾಸಣೆ ತೀವ್ರಗೊಳಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com