ಜಿಂಬಾಬ್ವೆ, ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿಬಂದಿದ್ದ ವ್ಯಕ್ತಿಯಲ್ಲಿ ಓಮಿಕ್ರಾನ್ ಪತ್ತೆ: ರಾಜಧಾನಿ ದೆಹಲಿಯಲ್ಲಿ ಎರಡನೇ ಪ್ರಕರಣ

ಜಿಂಬಾಬ್ವೆ ಮತ್ತು ದಕ್ಷಿಣ ಆಫ್ರಿಕಾ ಪ್ರಯಾಣ ಮಾಡಿ ಬಂದ 35 ವರ್ಷದ ದೆಹಲಿ ಮೂಲದ ವ್ಯಕ್ತಿಯಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜಧಾನಿ ದೆಹಲಿಯಲ್ಲಿ ಕೋವಿಡ್ ರೂಪಾಂತರಿ ಓಮಿಕ್ರಾನ್ ಪತ್ತೆಯಾದ ಎರಡನೇ ವ್ಯಕ್ತಿಯಾಗಿದ್ದಾರೆ.
ಕೊರೋನಾ ಎರಡನೇ ಅಲೆ ಸಂದರ್ಭದಲ್ಲಿ ದೆಹಲಿಯ ಆಸ್ಪತ್ರೆಯೊಂದರ ಮುಂದೆ ಕಂಡುಬಂದಿದ್ದ ದೃಶ್ಯ
ಕೊರೋನಾ ಎರಡನೇ ಅಲೆ ಸಂದರ್ಭದಲ್ಲಿ ದೆಹಲಿಯ ಆಸ್ಪತ್ರೆಯೊಂದರ ಮುಂದೆ ಕಂಡುಬಂದಿದ್ದ ದೃಶ್ಯ

ನವದೆಹಲಿ: ಜಿಂಬಾಬ್ವೆ ಮತ್ತು ದಕ್ಷಿಣ ಆಫ್ರಿಕಾ ಪ್ರಯಾಣ ಮಾಡಿ ಬಂದ 35 ವರ್ಷದ ದೆಹಲಿ ಮೂಲದ ವ್ಯಕ್ತಿಯಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜಧಾನಿ ದೆಹಲಿಯಲ್ಲಿ ಕೋವಿಡ್ ರೂಪಾಂತರಿ ಓಮಿಕ್ರಾನ್ ಪತ್ತೆಯಾದ ಎರಡನೇ ವ್ಯಕ್ತಿಯಾಗಿದ್ದಾರೆ.

ಅವರನ್ನು ದೆಹಲಿಯ ಎಲ್ ಎನ್ ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸುಸ್ತು ಕಾಣಿಸಿಕೊಳ್ಳುವುದು ಬಿಟ್ಟರೆ ಬೇರಾವುದೇ ಸಮಸ್ಯೆಯಿಲ್ಲ. ಜಿಂಬಾಬ್ವೆಯಿಂದ ಹಿಂತಿರುಗಿ ದಕ್ಷಿಣ ಆಫ್ರಿಕಾಕ್ಕೆ ಕೂಡ ಹೋಗಿ ಬಂದಿದ್ದರು. ಈಗಾಗಲೇ ಕೋವಿಡ್ ಎರಡೂ ಡೋಸ್ ಪಡೆದುಕೊಂಡಿದ್ದರೂ ಸೋಂಕು ತಗುಲಿದೆ ಎಂದು ತಿಳಿದುಬಂದಿದೆ.

ದೆಹಲಿಯಲ್ಲಿ ಓಮಿಕ್ರಾನ್ ಸೋಂಕು ಕಾಣಿಸಿಕೊಂಡ ರೋಗಿಗಳಿಗೆ ಚಿಕಿತ್ಸೆ ನೀಡಲು ಎಲ್ ಎನ್ ಜೆಪಿ ಆಸ್ಪತ್ರೆಯನ್ನು ನಿಯೋಜಿಸಲಾಗಿದೆ. ಕಳೆದ ಭಾನುವಾರ ತಾಂಜಾನಿಯಾದಿಂದ ದೆಹಲಿಗೆ ಬಂದಿದ್ದ 37 ವರ್ಷದ ವ್ಯಕ್ತಿಯಲ್ಲಿ ಓಮಿಕ್ರಾನ್ ಪತ್ತೆಯಾಗಿತ್ತು. 

ರಾಂಚಿಯ ನಿವಾಸಿಯಾಗಿರುವ ಈ ವ್ಯಕ್ತಿ ತಾಂಜಾನಿಯಾದಿಂದ ದೋಹಾಕ್ಕೆ ಪ್ರಯಾಣಿಸಿ ಅಲ್ಲಿಂದ ದೆಹಲಿಗೆ ಡಿಸೆಂಬರ್ 2ರಂದು ಕತಾರ್ ವಿಮಾನದಲ್ಲಿ ಬಂದಿದ್ದರು. ದಕ್ಷಿಣ ಆಫ್ರಿಕಾದಲ್ಲಿ ಜೊಹಾನ್ಸ್ ಬರ್ಗ್ ನಲ್ಲಿ ವಾರಗಳ ಕಾಲ ನೆಲೆಸಿದ್ದರು. ಇವರಲ್ಲಿ ಓಮಿಕ್ರಾನ್ ಸೋಂಕಿನ ಲಕ್ಷಣಗಳು ಸೌಮ್ಯ ಸ್ವರೂಪದಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com