ಗುಜರಾತ್: ಬಿಜೆಪಿ ಶಾಸಕಿ 44 ವರ್ಷದ ಆಶಾ ಪಟೇಲ್ ಡೆಂಗ್ಯೂಗೆ ಬಲಿ

ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದ ಗುಜರಾತ್‌ನ ಬಿಜೆಪಿ ಪಕ್ಷದ ಶಾಸಕಿ ಆಶಾ ಪಟೇಲ್ ಇಂದು ನಿಧನರಾಗಿದ್ದಾರೆ.
ಆಶಾ ಪಟೇಲ್
ಆಶಾ ಪಟೇಲ್

ಅಹಮದಾಬಾದ್‌: ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದ ಗುಜರಾತ್‌ನ ಬಿಜೆಪಿ ಪಕ್ಷದ ಶಾಸಕಿ ಆಶಾ ಪಟೇಲ್ ಇಂದು ನಿಧನರಾಗಿದ್ದಾರೆ.

ಮೆಹ್ಸಾನಾ ಜಿಲ್ಲೆಯ ಉಂಜಾ ವಿಧಾನಸಭಾ ಕ್ಷೇತ್ರದ 44 ವರ್ಷದ ಶಾಸಕಿ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಕಳೆದ ಶುಕ್ರವಾರ ಸಂಜೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಾಜಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್ 'ಉಂಜಾ ಪ್ರದೇಶದ ಶಾಸಕಿ ಆಶಾ ಪಟೇಲ್ ಅವರು ನಮ್ಮೊಂದಿಗಿಲ್ಲ. ಅವರನ್ನು ಡೆಂಗ್ಯೂ ಚಿಕಿತ್ಸೆಗಾಗಿ ಅಹಮದಾಬಾದ್‌ನ ಝೈಡಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಪ್ರಕರಣದ ಗಂಭೀರತೆ ಎಷ್ಟಿತ್ತೆಂದರೆ ವೈದ್ಯರ ತಂಡವು ಎಷ್ಟೇ ಪ್ರಯತ್ನಿಸಿದರೂ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. 

ಆಶಾ ಪಟೇಲ್ ನಿಧನಕ್ಕೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ರಾಜ್ಯಪಾಲ ಆಚಾರ್ಯ ದೇವವ್ರತ್ ಸಂತಾಪ ಸೂಚಿಸಿದ್ದಾರೆ. ಆಶಾ ಪಟೇಲ್ ಪಾಟಿದಾರ್ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ಅವರು ಮೊದಲು 2017ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಉಂಜಾದಿಂದ ಶಾಸಕರಾಗಿ ಆಯ್ಕೆಯಾದರು. ಆದರೆ ಫೆಬ್ರವರಿ 2019ರಲ್ಲಿ ಆಡಳಿತಾರೂಢ ಬಿಜೆಪಿಗೆ ಸೇರಿದ್ದು ನಂತರ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com