ಯುವ ಸಮಾವೇಶಕ್ಕೆ ಅನುಮತಿ ರದ್ದು: ಗೃಹ ಬಂಧನದಲ್ಲಿ ಮೆಹಬೂಬಾ ಮುಫ್ತಿ

ಮೆಹಬೂಬಾ ಮುಫ್ತಿ ಅವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯ (ಪಿಡಿಪಿ) ಯುವ ಸಮಾವೇಶಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದು, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.
ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ

ಶ್ರೀನಗರ: ಮೆಹಬೂಬಾ ಮುಫ್ತಿ ಅವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯ (ಪಿಡಿಪಿ) ಯುವ ಸಮಾವೇಶಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದು, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.

ಶ್ರೀನಗರದ ಹಿರಿಯ ಪೊಲೀಸ್ ಅಧೀಕ್ಷಕರ ಕಚೇರಿಯಿಂದ ಸ್ವೀಕರಿಸಲಾದ ಕೋವಿಡ್ ಮಾರ್ಗಸೂಚಿಗಳನ್ನು ಒಳಗೊಂಡಂತಿರುವ ವರದಿಯ ಆಧಾರದ ಮೇಲೆ ಪಿಡಿಪಿ ವತಿಯಿಂದ ಗುಪ್ಕಾರ್‌ನಲ್ಲಿ ನಡೆಯಲಿರುವ ಯುವ ಸಮಾವೇಶಕ್ಕೆ ಅನುಮತಿ ನೀಡದಂತೆ ಆದೇಶ ನೀಡಲಾಗಿದೆ ಎಂದು ದಕ್ಷಿಣ ಶ್ರೀನಗರದ ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್​ ಹೇಳಿದ್ದಾರೆ.

ಸ್ಟೇಷನ್ ಹೌಸ್ ಅಧಿಕಾರಿಯಾದ ರಾಮ್ ಮುನ್ಷಿ ಬಾಗ್‌ ಅವರಿಗೆ ಸರ್ಕಾರದ ಅನುಮತಿಯಿಲ್ಲದೆ ಗುಪ್ಕಾರ್‌ನಲ್ಲಿ ಅಂತಹ ಯಾವುದೇ ಕಾರ್ಯಕ್ರಮ ನಡೆಯದಂತೆ ನೋಡಿಕೊಳ್ಳಲು ಈ ಮೂಲಕ ನಿರ್ದೇಶನ ನೀಡಲಾಗಿದೆ ಎಂದು  ತಿಳಿಸಿದ್ದಾರೆ.

ಯುವ ಸಮಾವೇಶ ಹಿನ್ನೆಲೆಯಲ್ಲಿ ಮೆಹಬೂಬಾ ಮುಫ್ತಿ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದ್ದು, ಮೆಹಬೂಬಾ ಮುಫ್ತಿ ಸಮಾವೇಶಕ್ಕೆ ಹೊರಡಬಹುದಾದ ಎಲ್ಲಾ ರಸ್ತೆಗಳನ್ನು ಪೊಲೀಸರು ಸೀಲ್ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com