ಡಿ.13ರಂದು 900 ಕೋಟಿ ರೂ. ವೆಚ್ಚದ ಕಾಶಿ ವಿಶ್ವನಾಥ್ ಕಾರಿಡಾರ್ ಉದ್ಘಾಟಿಸಲಿರುವ ಪ್ರಧಾನಿ ಮೋದಿ!

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ವಾರಾಣಸಿಯಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಅನ್ನು ಉದ್ಘಾಟಿಸಲಿದ್ದಾರೆ. ಇಡೀ ಕಾರ್ಯಕ್ರಮವನ್ನು ದೇಶಾದ್ಯಂತ ನೇರ ಪ್ರಸಾರ ಮಾಡಲಾಗುತ್ತದೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ವಾರಣಾಸಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ವಾರಾಣಸಿಯಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಅನ್ನು ಉದ್ಘಾಟಿಸಲಿದ್ದಾರೆ. ಇಡೀ ಕಾರ್ಯಕ್ರಮವನ್ನು ದೇಶಾದ್ಯಂತ ನೇರ ಪ್ರಸಾರ ಮಾಡಲಾಗುತ್ತದೆ. ದೇಶಾದ್ಯಂತ 2000ಕ್ಕೂ ಹೆಚ್ಚು ಸಂತರು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

800 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಶಿ ವಿಶ್ವನಾಥ ಧಾಮ ಯೋಜನೆ ಪೂರ್ಣಗೊಂಡಿದೆ. ಈ ಕಾರಿಡಾರ್ ಯೋಜನೆ ಭಕ್ತಾದಿಗಳ ಪ್ರಯಾಣದ ಅವಧಿಯನ್ನು ಕಡಿಮೆ ಮಾಡುತ್ತದೆ ಹಾಗೂ ದೇವಾಲಯ ಮತ್ತು ಗಂಗಾ ನದಿಯ ನಡುವೆ ನೇರ ಸಂಪರ್ಕ ಸ್ಥಾಪಿಸುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ 2 ದಿನಗಳ ಕಾಲ ವಾರಾಣಸಿಯಲ್ಲಿಯೇ ಇರಲಿದ್ದು, ನಾಳೆ ಮತ್ತು ನಾಡಿದ್ದು ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಈ ಕಾರ್ಯಕ್ರಮವನ್ನು ಸ್ಮರಣೀಯವಾಗಿಸಲು ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ.

ನಾಳೆ ಬಾಬಾನ ದರ್ಶನದ ನಂತರ ಕಾಶಿ ವಿಶ್ವನಾಥ್ ಕಾರಿಡಾರ್ ಅನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದ ನಂತರ ಪ್ರಧಾನಮಂತ್ರಿಯವರು ಬರೇಕಾ ಅತಿಥಿ ಗೃಹವನ್ನು ತಲುಪಲಿದ್ದಾರೆ. ಸಂಜೆ ರೋರೋ ಬೋಟ್ ಮೂಲಕ ಗಂಗಾ ಆರತಿಗೆ ತೆರಳಲಿದ್ದು ಆರತಿಯಲ್ಲಿ ಎಲ್ಲ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಆರತಿಯ ನಂತರ ಪ್ರಧಾನಿ ಮತ್ತೆ ಬರೇಕೆಗೆ ತೆರಳಲಿದ್ದಾರೆ.

ಡಿಸೆಂಬರ್ 14ರಂದು ಬೆಳಿಗ್ಗೆ 9:30ಕ್ಕೆ ಕಾಶಿ ವಾರಣಾಸಿ ಮಹಾನಗರ ಮತ್ತು ಬಿಜೆಪಿ ಸಂಘಟನೆಯ ಜಿಲ್ಲಾ ಪದಾಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಔಪಚಾರಿಕ ಸಭೆ ನಡೆಸಲಿದ್ದಾರೆ. 10 ಗಂಟೆಗೆ ಬರೇಕಾ ಆಡಳಿತ ಭವನದಲ್ಲಿ ಮುಖ್ಯಮಂತ್ರಿಗಳೊಂದಿಗೆ ಸಮಾವೇಶ ನಡೆಯಲಿದೆ. ಈ ಸಮ್ಮೇಳನ ನಾಲ್ಕು ಗಂಟೆಗಳ ಕಾಲ ನಡೆಯಲಿದೆ. ಇದರಲ್ಲಿ ಎಲ್ಲಾ ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳ ಕಾಮಗಾರಿ ಮತ್ತು ಯೋಜನೆಗಳ ಪ್ರಸ್ತುತಿ ನೀಡಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com