ಕೊರೊನಾ ಸಮಯದಲ್ಲಿ ಕೆಲಸ ಕಳೆದುಕೊಂಡಿದ್ದ ಸಾಫ್ಟ್ ವೇರ್ ಉದ್ಯೋಗಿ ಮಹಿಳೆ ಮಕ್ಕಳನ್ನು ಕೊಂದು ಆತ್ಮಹತ್ಯೆ

ಕೆಲಸ ಕಳೆದುಕೊಂಡ ನಂತರ ಸ್ವಾತಿ ಅವರು ಮನೆಯಲ್ಲೇ ಇದ್ದರು. ಪತಿ ಸಾಯಿಕುಮಾರ್ ಕಡಿಮೆ ಸಂಬಳಕ್ಕೆ ಕಾಲ್ ಸೆಂಟರ್ ಸೇರಿಕೊಂಡಿದ್ದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹೈದರಾಬಾದ್: 32 ವರ್ಷದ ಸಾಫ್ಟ್ ವೇರ್ ಉದ್ಯೋಗಿ ಮಹಿಳೆ ಆರ್ಥಿಕ ಸಂಕಷ್ಟಕ್ಕೆ ಬೇಸತ್ತು ತಮ್ಮ ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಕೊಂದು ತಾವು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಹೈದರಾಬಾದಿನಲ್ಲಿ ನಡೆದಿದೆ. 

ಸ್ವಾರ್ತಿ ಕುಸುಮಾ ಮತ್ತು ಪತಿ ಸಾಯಿಕುಮಾರ್ ಇಬ್ಬರೂ ಕೊರೊನಾ ಸಮಯದಲ್ಲಿ ಸಾಫ್ಟ್ ವೇರ್ ಉದ್ಯೋಗ ಕಳೆದುಕೊಂಡಿದ್ದರು. ಕೆಲಸ ಕಳೆದುಕೊಂಡ ನಂತರ ಸಾಯಿಕುಮಾರ್ ಕಾಲ್ ಸೆಂಟರ್ ನಲ್ಲಿ ಕಡಿಮೆ ಸಂಬಳಕ್ಕೆ ಸೇರಿಕೊಂಡಿದ್ದರು. ಸ್ವಾತಿ ಅವರು ಮನೆಯಲ್ಲೇ ಇದ್ದರು.

ಪತಿ ಸಾಯಿಕುಮಾರ್ ಗೆ ಬರುತ್ತಿದ್ದ ಸಂಬಳ ಮಕ್ಕಳ ಫೀಸಿಗೂ ಸಾಕಾಗುತ್ತಿಲ್ಲವೆಂದು ಸ್ವಾತಿ ಚಿಂತಿತರಾಗಿದ್ದರು ಎನ್ನಲಾಗಿದೆ. ಸಾಯಿಕುಮಾರ್ ಕೆಲಸಕ್ಕೆ ತೆರಳಿದ್ದ ವೇಳೆ ಬೆಡ್ ರೂಮಿನಲ್ಲಿ ಆತ್ಮಹತ್ಯೆ ನೋಟ್ ಬರೆದು ಸ್ವಾತಿ 5 ವರ್ಷದ ಮಗ ಮಗು 3 ವರ್ಷದ ಮಗಳನ್ನು ಕೊಂದು ತಾವೂ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com