ಅವಂತಿಪೋರಾದಲ್ಲಿ ಎನ್ಕೌಂಟರ್: ಓರ್ವ ಉಗ್ರನ ಹೊಡೆದುರುಳಿಸಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭದ್ರತಾಪಡೆಗಳು ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಅವಂತಿಪೋರಾ: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭದ್ರತಾಪಡೆಗಳು ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

ಅವಂತಿಪೋರಾದ ಬರಗಾಮ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿಕುಳಿತಿರುವ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಭದ್ರತಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಕೂಡಲೇ ಸ್ಥಳವನ್ನು ಸುತ್ತುವರೆದ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com