ಶ್ರೀನಗರದಲ್ಲಿ ಎನ್ ಕೌಂಟರ್ ಗೆ ಇಬ್ಬರು ಉಗ್ರರ ಬಲಿ

ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದ ಹೊರವಲಯದಲ್ಲಿ ಸೋಮವಾರ ನಡೆದ ಭದ್ರತಾ ಪಡೆಗಳ ಜೊತೆಗೆ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಉಗ್ರರ ಹತ್ಯೆಯಾಗಿದೆ ಎಂದು  ಪೊಲೀಸರು ತಿಳಿಸಿದ್ದಾರೆ.
ಭದ್ರತಾ ಪಡೆಗಳ ಸಾಂದರ್ಭಿಕ ಚಿತ್ರ
ಭದ್ರತಾ ಪಡೆಗಳ ಸಾಂದರ್ಭಿಕ ಚಿತ್ರ

ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದ ಹೊರವಲಯದಲ್ಲಿ ಸೋಮವಾರ ನಡೆದ ಭದ್ರತಾ ಪಡೆಗಳ ಜೊತೆಗೆ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಉಗ್ರರ ಹತ್ಯೆಯಾಗಿದೆ ಎಂದು  ಪೊಲೀಸರು ತಿಳಿಸಿದ್ದಾರೆ. ರಂಗ್ರೀತ್ ಪ್ರದೇಶದಲ್ಲಿ ಎನ್ ಕೌಂಟರ್ ನಡೆದಿರುವುದಾಗಿ ಅವರು ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಶ್ಮೀರ ವಲಯ ಪೊಲೀಸರು, ಇಬ್ಬರು ಅಪರಿಚಿತ ಉಗ್ರರ ಹತ್ಯೆಯಾಗಿದೆ. ಶೋಧ ಕಾರ್ಯ ಮುಂದುವರೆದಿರುವುದಾಗಿ ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಜೈಶ್ ಇ ಮೊಹಮ್ಮದ್ ನಡೆಸಿದ ದಾಳಿಗೆ ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾದ ಮರುದಿನವೇ ಈ ಕಾರ್ಯಾಚರಣೆ ನಡೆದಿದೆ. 

ಕಾರ್ಯಾಚರಣೆ ವೇಳೆ ಸಿಕ್ಕಿಬಿದ್ದ ಉಗ್ರರಿಗೆ ಶರಣಾಗಲು ಅವಕಾಶ ನೀಡಲಾಯಿತು. ಆದರೆ, ಅವರು ನಿರಾಕರಿಸಿರುವುದರ ಜೊತೆಗೆ ಮನಬಂದಂತೆ ಗುಂಡು ಹಾರಿಸಿದರು. ಹಾಗಾಗಿ ನಾವು ಪ್ರತಿ ದಾಳಿ ನಡೆಸಿದೆವು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com