ಉತ್ತರ ಪ್ರದೇಶ: ಕುಡಿದ ಮತ್ತಿನಲ್ಲಿ ತನ್ನ ಮಗಳನ್ನೇ ರೇಪ್ ಮಾಡಿದ ತಂದೆ!
ಒಂಬತ್ತು ವರ್ಷದ ಬಾಲಕಿಯ ಮೇಲೆ ಆಕೆಯ ತಂದೆಯೇ ಕುಡಿದ ಅಮಲಿನಲ್ಲಿ ಅತ್ಯಾಚಾರವೆಸಗಿರುವ ಘಟನೆ ಉತ್ತರಪ್ರದೇಶದ ಫತೇಪುರ್ ಜಿಲ್ಲೆಯ ಖಗಾ ಕೊತ್ವಾಲಿ ಪೊಲೀಸ್ ವೃತ್ತದ ವ್ಯಾಪ್ತಿಯ ಹಳ್ಳಿಯಲ್ಲಿ ನಡೆದಿದೆ.
Published: 15th December 2021 04:17 PM | Last Updated: 15th December 2021 05:31 PM | A+A A-

ರೇಪ್
ಫತೇಪುರ್ (ಉತ್ತರ ಪ್ರದೇಶ): ಒಂಬತ್ತು ವರ್ಷದ ಬಾಲಕಿಯ ಮೇಲೆ ಆಕೆಯ ತಂದೆಯೇ ಕುಡಿದ ಅಮಲಿನಲ್ಲಿ ಅತ್ಯಾಚಾರವೆಸಗಿರುವ ಘಟನೆ ಉತ್ತರಪ್ರದೇಶದ ಫತೇಪುರ್ ಜಿಲ್ಲೆಯ ಖಗಾ ಕೊತ್ವಾಲಿ ಪೊಲೀಸ್ ವೃತ್ತದ ವ್ಯಾಪ್ತಿಯ ಹಳ್ಳಿಯಲ್ಲಿ ನಡೆದಿದೆ.
ಆತನ ಜೊತೆಯಲ್ಲಿ ಮಲಗಿದ್ದ ಬಾಲಕಿಯ ಮೇಲೆ ಪಾಪಿ ತಂದೆ ಕುಡಿದ ಮತ್ತಿನಲ್ಲಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ಸಂತ್ರಸ್ತೆಯ ಕೂಗು ಕೇಳಿ ಸ್ಥಳಕ್ಕೆ ಧಾವಿಸಿದ ಆರೋಪಿಯ ಹಿರಿಯ ಸಹೋದರ ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಸಿಒ) ಖಗಾ, ಗಯಾದತ್ ಮಿಶ್ರಾ ತಿಳಿಸಿದ್ದಾರೆ.
ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಬಾಲಕಿಯ ತಾಯಿ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದರು.