ದೆಹಲಿಯಲ್ಲಿ ಮತ್ತೆ ನಾಲ್ಕು ಓಮಿಕ್ರಾನ್ ಪ್ರಕರಣ ಪತ್ತೆ, ರಾಷ್ಟ್ರ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆ

ರಾಷ್ಟ್ರ ರಾಜಧಾನಿಯ ದೆಹಲಿಯಲ್ಲಿ ಮತ್ತೆ ನಾಲ್ವರಿಗೆ ಕೋವಿಡ್-19 ಹೊಸ ರೂಪಾಂತರಿ ಓಮಿಕ್ರಾನ್‌ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ರಾಷ್ಟ್ರ ರಾಜಧಾನಿಯ ದೆಹಲಿಯಲ್ಲಿ ಮತ್ತೆ ನಾಲ್ವರಿಗೆ ಕೋವಿಡ್-19 ಹೊಸ ರೂಪಾಂತರಿ ಓಮಿಕ್ರಾನ್‌ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.

ದೆಹಲಿಯಲ್ಲಿ ಇದುವರೆಗೆ 10 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಮತ್ತು ಅವುಗಳಲ್ಲಿ ಯಾವುದೂ "ತೀವ್ರ" ಗಂಭೀರವ ಸ್ವರೂಪದಲ್ಲಿಲ್ಲ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರು ಗುರುವಾರ ಹೇಳಿದ್ದಾರೆ.

ಶಂಕಿತ ಓಮಿಕ್ರಾನ್ ಪ್ರಕರಣಗಳನ್ನು ಪ್ರತ್ಯೇಕಿಸಲು ಮತ್ತು ಚಿಕಿತ್ಸೆಗಾಗಿ ಲೋಕನಾಯಕ ಆಸ್ಪತ್ರೆ ನಿಗದಿ ಮಾಡಲಾಗಿದ್ದು, ಪ್ರಸ್ತುತ ಅಲ್ಲಿ 40 ಜನರನ್ನು ವಿಶೇಷ ಸೌಲಭ್ಯಕ್ಕೆ ದಾಖಲಿಸಲಾಗಿದೆ. ಇವರಲ್ಲಿ 38 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಅವರು ತಿಳಿಸಿದ್ದಾರೆ.

"ದೆಹಲಿಯಲ್ಲಿ ಇದುವರೆಗೆ ಹತ್ತು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಅವರಲ್ಲಿ ಒಬ್ಬರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ" ಎಂದು ಜೈನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com