ಢಾಕಾ: ನವೀಕೃತ ರಮನಾ ಕಾಳಿ ಮಂದಿರ ಉದ್ಘಾಟಿಸಲಿರುವ ರಾಷ್ಟ್ರಪತಿ ಕೋವಿಂದ್

ಬಾಂಗ್ಲಾದೇಶದಲ್ಲಿರುವ ಐತಿಹಾಸಿಕ ರಮನಾ ಕಾಳಿ ಮಂದಿರವನ್ನು ನವೀಕರಿಸಲಾಗಿದ್ದು, ಇದನ್ನು ರಾಷ್ಟ್ರಪತಿ ರಾಮನಾಥ್​​ ಕೋವಿಂದ್​ ಶುಕ್ರವಾರ ಉದ್ಘಾಟಿಸಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ ಹೇಳಿದ್ದಾರೆ.
ಬಾಂಗ್ಲಾ ಪ್ರವಾಸದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್
ಬಾಂಗ್ಲಾ ಪ್ರವಾಸದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಢಾಕ: ಬಾಂಗ್ಲಾದೇಶದಲ್ಲಿರುವ ಐತಿಹಾಸಿಕ ರಮನಾ ಕಾಳಿ ಮಂದಿರವನ್ನು ನವೀಕರಿಸಲಾಗಿದ್ದು, ಇದನ್ನು ರಾಷ್ಟ್ರಪತಿ ರಾಮನಾಥ್​​ ಕೋವಿಂದ್​ ಶುಕ್ರವಾರ ಉದ್ಘಾಟಿಸಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ ಹೇಳಿದ್ದಾರೆ.

1971 ರಲ್ಲಿ ಪಾಕಿಸ್ತಾನಿ ಪಡೆಗಳು ನಡೆಸಿದ್ದ ಕಾರ್ಯಾಚರಣೆ ವೇಳೆ ಈ ದೇವಸ್ಥಾನವನ್ನು ಧ್ವಂಸಗೊಳಿಸಲಾಗಿತ್ತು. ಇದಾದ 50 ವರ್ಷಗಳ ನಂತರ ದೇವಸ್ಥಾನವನ್ನು ನವೀಕರಿಸಲಾಗಿದೆ.

ಇದು ಉಭಯ ದೇಶಗಳಿಗೆ ಭಾವನಾತ್ಮಕ ಕ್ಷಣ ಎಂದು ವಿದೇಶಾಂಗ ಕಾರ್ಯದರ್ಶಿ ಬಣ್ಣಿಸಿದ್ದಾರೆ. ಬಾಂಗ್ಲಾದೇಶದ ಸ್ವಾತಂತ್ರ್ಯದ ಸುವರ್ಣ ಮಹೋತ್ಸವದ ಆಚರಣೆಯಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ಕೋವಿಂದ್ ಅವರು, ಎಂ ಅಬ್ದುಲ್ ಹಮೀದ್ ಅವರ ಆಹ್ವಾನದ ಮೇರೆಗೆ ಬಾಂಗ್ಲಾದೇಶದಲ್ಲಿದ್ದಾರೆ.

ಡಿಸೆಂಬರ್ 17 ರಂದು ರಾಷ್ಟ್ರಪತಿ ಕೋವಿಂದ್ ಅವರು ನವೀಕರಿಸಿದ ಶ್ರೀ ರಮನಾ ಕಾಳಿ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಈ ದೇವಸ್ಥಾನವು 1971 ರಲ್ಲಿ ಪಾಕಿಸ್ತಾನಿ ಪಡೆಗಳು ನಡೆಸಿದ ‘ಆಪರೇಷನ್ ಸರ್ಚ್‌ಲೈಟ್’ ಕಾರ್ಯಾಚರಣೆಯಲ್ಲಿ ಸಂಪೂರ್ಣವಾಗಿ ನಾಶವಾಗಿತ್ತು ಎಂದು ಶೃಂಗ್ಲಾ ಹೇಳಿದ್ದಾರೆ.

ಹಾಗಾಗಿ 50 ವರ್ಷಗಳ ನಂತರ ನವೀಕೃತ ರಮನಾ ಕಾಳಿ ಮಂದಿರವನ್ನು ನಾವು ಉದ್ಘಾಟನೆ ಮಾಡುತ್ತಿರುವುದು ಔಚಿತ್ಯಪೂರ್ಣವಾಗಿದೆ ಮತ್ತು ಇದು ಕೇವಲ ಸಾಂಕೇತಿಕವಾಗಿರದೆ ನಮ್ಮ ಎರಡೂ ದೇಶಗಳಿಗೆ ಇದು ಅತ್ಯಂತ ಭಾವನಾತ್ಮಕ ಕ್ಷಣವಾಗಿದೆ ಎಂದು ಅವರು ಹೇಳಿದರು.

ಢಾಕಾ ಟ್ರಿಬ್ಯೂನ್‌ನಲ್ಲಿನ ವರದಿಯ ಪ್ರಕಾರ, ರಾಷ್ಟ್ರಪತಿ ಕೋವಿಂದ್ ಅವರು ದೇವಾಲಯದ ಸಮಿತಿಯ ಸದಸ್ಯರೊಂದಿಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವ ಆಸಕ್ತಿಯನ್ನು ವ್ಯಕ್ತಪಡಿಸಿದ್ದಾರೆ.

ದೇವಾಲಯದ ನವೀಕರಣವನ್ನು ಭಾರತ ಬೆಂಬಲಿಸಿತು. ಮುಸ್ಲಿಂ ಬಹುಸಂಖ್ಯಾತ ಬಾಂಗ್ಲಾದೇಶದ 169 ಮಿಲಿಯನ್ ಜನಸಂಖ್ಯೆಯಲ್ಲಿ ಹಿಂದೂಗಳು ಶೇ. 10 ರಷ್ಟಿದ್ದಾರೆ. ಮೂರು ದಿನಗಳ ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ಕೋವಿಂದ್ ಅವರು ಬಾಂಗ್ಲಾದೇಶದ ಅಧ್ಯಕ್ಷ ಎಂ ಅಬ್ದುಲ್ ಹಮೀದ್ ಅವರೊಂದಿಗೆ ಬುಧವಾರ ವ್ಯಾಪಕ ಮಾತುಕತೆ ನಡೆಸಿದರು.

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ವಿದೇಶಾಂಗ ಸಚಿವ ಎ ಕೆ ಅಬ್ದುಲ್ ಮೊಮೆನ್ ಅವರು ರಾಷ್ಟ್ರಪತಿ ಕೋವಿಂದ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದರು ಮತ್ತು ದ್ವಿಪಕ್ಷೀಯ ಬಾಂಧವ್ಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com