ಕಳೆದ 7 ವರ್ಷದಲ್ಲಿ ದೇಶ ಸಾಕಷ್ಟು ಬದಲಾವಣೆ ಕಂಡಿದೆ ಎಂದು ನಮ್ಮನ್ನು ಟೀಕಿಸುವವರು ಕೂಡ ಒಪ್ಪಿಕೊಳ್ಳುತ್ತಾರೆ: ಅಮಿತ್ ಶಾ

ನರೇಂದ್ರ ಮೋದಿ ನೇತೃತ್ವದ ಸರ್ಕಾರ 2014ರಲ್ಲಿ ಅಧಿಕಾರಕ್ಕೆ ಬರುವ ಸಮಯದಲ್ಲಿ ಜನರು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಕಳೆದುಕೊಳ್ಳಲು ಆರಂಭಿಸಿದ್ದರು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದರು. 
ಗೃಹ ಸಚಿವ ಅಮಿತ್ ಶಾ
ಗೃಹ ಸಚಿವ ಅಮಿತ್ ಶಾ

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸರ್ಕಾರ 2014ರಲ್ಲಿ ಅಧಿಕಾರಕ್ಕೆ ಬರುವ ಸಮಯದಲ್ಲಿ ಜನರು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಕಳೆದುಕೊಳ್ಳಲು ಆರಂಭಿಸಿದ್ದರು. ನಮ್ಮ ಬಹು ಪಕ್ಷ ಪ್ರಜಾಪ್ರಭುತ್ವ ವ್ಯವಸ್ಥೆ ವಿಫಲವಾಗುತ್ತಿರುವುದನ್ನು ನೋಡಿ ದೇಶದ ಜನತೆಗೆ ಅಚ್ಚರಿಯಾಗುತ್ತಿತ್ತು. ನಮ್ಮ ಬಹುಪಕ್ಷೀಯ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಜನರ ನಂಬಿಕೆಯನ್ನು ಮತ್ತೆ ಬಲಪಡಿಸುವಂತೆ ಮಾಡಿದ್ದು ನಮ್ಮ ಸರ್ಕಾರದ ಬಹುದೊಡ್ಡ ಸಾಧನೆಯಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದರು. 

ಎಫ್ ಐಸಿಸಿಐ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಏಳು ವರ್ಷಗಳಲ್ಲಿ ದೇಶದಲ್ಲಿ ಸಾಕಷ್ಟು ಬದಲಾವಣೆಯಾಗಿದೆ ಎಂದು ನಮ್ಮನ್ನು ಟೀಕಿಸುವವರು ಕೂಡ ಒಪ್ಪಿಕೊಳ್ಳುತ್ತಾರೆ. ನಮ್ಮ ಸರ್ಕಾರದ ವಿರುದ್ಧ ಯಾವುದೇ ಭ್ರಷ್ಟಾಚಾರ ಆರೋಪಗಳಿಲ್ಲ. ನಾವು ತೆಗೆದುಕೊಂಡ ಕೆಲವು ನಿರ್ಧಾರಗಳು ತಪ್ಪಾಗಿರಬಹುದು ಆದರೆ ನಮ್ಮ ಉದ್ದೇಶ ತಪ್ಪಾಗಿತ್ತು ಎಂದು ಯಾರೂ ಹೇಳಲು ಸಾಧ್ಯವಿಲ್ಲ ಎಂದರು.

ಕಳೆದ ಜುಲೈ-ಸೆಪ್ಟೆಂಬರ್ ನಲ್ಲಿ ದೇಶದ ಜಿಡಿಪಿ ಶೇಕಡಾ 8.4ರಷ್ಟಿದೆ. 2021-22ರಲ್ಲಿ ವಿಶ್ವದಲ್ಲಿ ಅತಿ ವೇಗವಾಗಿ ಬೆಳವಣಿಗೆಯಾಗುತ್ತಿರುವ ದೇಶವಾಗಿ ಭಾರತ ಹೊರಬೊಮ್ಮುವುದರಲ್ಲಿ ಯಾವುದೇ ಸಂಶಯವಿಲ್ಲ. ಜಿಡಿಪಿಯಲ್ಲಿ ದ್ವಿಗುಣ ಕಂಡುಬಂದರೆ ನನಗೆ ಯಾವುದೇ ಅಚ್ಚರಿಯಿಲ್ಲ ಎಂದು ಸಹ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com