ಯುಪಿ ಚುನಾವಣೆಗೆ ತಯಾರಿ: ರಾಜ್ಯದ 40 ಸಂಸದರನ್ನು ಭೇಟಿ ಮಾಡಲಿರುವ ಪ್ರಧಾನಿ ಮೋದಿ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ತಯಾರಿ ನಡೆಸುತ್ತಿದ್ದು, ಇದರ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದ 40 ಸಂಸದರನ್ನು ಭೇಟಿ ಮಾಡಲಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ತಯಾರಿ ನಡೆಸುತ್ತಿದ್ದು, ಇದರ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದ 40 ಸಂಸದರನ್ನು ಭೇಟಿ ಮಾಡಲಿದ್ದಾರೆ. 

ತಮ್ಮ ಅಧಿಕೃತ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಸದರನ್ನು ಉಪಹಾರ ಕೂಟದಲ್ಲಿ ಭೇಟಿ ಮಾಡಲಿದ್ದು, ಈ ವರೆಗೂ ಎಲ್ಲಾ ದಕ್ಷಿಣ ಭಾರತದ ಸಂಸದರು, ಈಶಾನ್ಯ ರಾಜ್ಯಗಳ ಸಂಸದರು, ಮಧ್ಯಪ್ರದೇಶದ ಸಂಸದರನ್ನು ಮೋದಿ ಭೇಟಿಯಾಗಿದ್ದಾರೆ. 

ಈ ಸಭೆಗೆ ಯಾವುದೇ ಅಜೆಂಡಾ ಇಲ್ಲ. ಸಭೆಯಲ್ಲಿ ಪಕ್ಷದ ಸಂಸದರಿಗೆ ಜನರೊಂದಿಗೆ ಹೆಚ್ಚು ಸಂವಹನ ನಡೆಸುವಂತೆ ಸೂಚಿಸಿದ್ದು, ವಿಐಪಿ ಸಂಸ್ಕೃತಿಯನ್ನು ಬದಿಗಿರಿಸಿ ರಾಜಕೀಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುವಂತೆ ಈ ವರೆಗಿನ ಸಭೆಗಳಲ್ಲಿ ಸಂಸದರಿಗೆ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com