ಜೈಪುರ: ನೆರೆ ಮನೆಯ 14 ವರ್ಷದ ಬಾಲಕ ಏಳು ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಘಟನೆ ರಾಜಸ್ಥಾನದ ಜೈಪುರದಲ್ಲಿ ಜರುಗಿದೆ.
ಬಾಲಕ ಹಾಗೂ ಬಾಲಕಿ ನಿನ್ನೆ ಸಂಜೆ ಮನೆಯ ಹೊರಗೆ ಆಟವಾಡುತ್ತಿದ್ದರು. ಬಳಿಕ ಆಕೆಯನ್ನು ಪುಸಲಾಯಿಸಿ ಮನೆಗೆ ಕರೆದೊಯ್ದು ಬಾಲಕ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ಬಾಲಕಿ ಕಿರುಚಲು ಪ್ರಾರಂಭಿಸಿದಾಗ ಪೋಷಕರು ಅಲ್ಲಿಗೆ ಧಾವಿಸಿದ್ದಾರೆ. ಆದರೆ, ಅಷ್ಟರಲ್ಲೇ ಬಾಲಕ ಪರಾರಿಯಾಗಿದ್ದ.
ಸಂತ್ರಸ್ತೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Advertisement