ಕೋವಿಡ್-19: ದೇಶದಲ್ಲಿ ಇಂದು 7,081 ಹೊಸ ಸೋಂಕು ಪ್ರಕರಣಗಳು, 264 ಸಾವು ವರದಿ

ಜಗತ್ತಿನಾದ್ಯಂತ ಓಮಿಕ್ರಾನ್ ರೂಪಾಂತರಿ ವೈರಸ್ ನ ಭೀತಿ ಮುಂದುವರೆದಿರುವಂತೆಯೇ ಇತ್ತ ಭಾರತದಲ್ಲಿ ಕೋವಿಡ್ ಏರಿಳಿತ ಮುಂದುವರೆದಿದ್ದು, ಇಂದು ಕೂಡ ದೇಶಾದ್ಯಂತ 7 ಸಾವಿರಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.
ಕೋವಿಡ್ ಲಸಿಕೆ ಸಾಂದರ್ಭಿಕ ಚಿತ್ರ
ಕೋವಿಡ್ ಲಸಿಕೆ ಸಾಂದರ್ಭಿಕ ಚಿತ್ರ

ನವದೆಹಲಿ: ಜಗತ್ತಿನಾದ್ಯಂತ ಓಮಿಕ್ರಾನ್ ರೂಪಾಂತರಿ ವೈರಸ್ ನ ಭೀತಿ ಮುಂದುವರೆದಿರುವಂತೆಯೇ ಇತ್ತ ಭಾರತದಲ್ಲಿ ಕೋವಿಡ್ ಏರಿಳಿತ ಮುಂದುವರೆದಿದ್ದು, ಇಂದು ಕೂಡ ದೇಶಾದ್ಯಂತ 7 ಸಾವಿರಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 7,081 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ. ಅಂತೆಯೇ ಇದೇ ಅವಧಿಯಲ್ಲಿ 264 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೋವಿಡ್ ಗೆ ದೇಶದಲ್ಲಿ ಬಲಿಯಾದವರ ಸಂಖ್ಯೆ 4,77,422 ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 7469 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,41,78,940ಕ್ಕೆ ಏರಿಕೆಯಾಗಿದ್ದು,  ದೇಶದಲ್ಲಿನ ಚೇತರಿಕೆ ಪ್ರಮಾಣ ಶೇ,98.38ಕ್ಕೆ ಏರಿಕೆಯಾಗಿದೆ. ಅಂತೆಯೇ ದೇಶದಲ್ಲಿನ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 83, 913ರಷ್ಟಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com