ಜಮ್ಮು ಮತ್ತು ಕಾಶ್ಮೀರ: ಯೋಧರ ಗುಂಡಿಗೆ ಉಗ್ರ ಹತ, ಎನ್ಕೌಂಟರ್ ಮುಂದುವರಿಕೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಯೋಧರ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ತಡರಾತ್ರಿ ಮತ್ತೋರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ.
Published: 19th December 2021 08:02 AM | Last Updated: 19th December 2021 08:02 AM | A+A A-

ಕಾಶ್ಮೀರದಲ್ಲಿ ಸೇನಾ ಎನ್ಕೌಂಟರ್
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಯೋಧರ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ತಡರಾತ್ರಿ ಮತ್ತೋರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ.
J&K | Encounter breaks out between security forces and terrorists at Harwan area of Srinagar: Kashmir Zone Police
— ANI (@ANI) December 18, 2021
Details awaited.
ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಭಾನುವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್ ನಡೆದಿದ್ದು, ಈ ವೇಳೆ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
One unidentified terrorist neutralized in the encounter that broke out between security forces and terrorists at Harwan area of Srinagar: Kashmir Zone Police
— ANI (@ANI) December 18, 2021
ಶ್ರೀನಗರದ ಹರ್ವಾನ್ ಪ್ರದೇಶದಲ್ಲಿ ಈ ಎನ್‌ಕೌಂಟರ್ ನಡೆದಿದ್ದು, ಘಟನಾ ಪ್ರದೇಶವನ್ನು ಸುತ್ತುವರೆದಿರುವ ಸೇನೆ ಕಾರ್ಯಾಚರಣೆ ಮುಂದುವರೆಸಿದೆ. ಅಲ್ಲದೆ ಸುತ್ತಮುತ್ತಲ ಪ್ರದೇಶದಲ್ಲಿ ತೀವ್ರ ಶೋಧ ನಡೆಸಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.