ಬಿಜೆಪಿ ಅವಧಿಯಲ್ಲಿ ಅಭಿವೃದ್ಧಿಯಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರ ಸ್ನೇಹಿತರದ್ದಷ್ಟೇ: ಪ್ರಿಯಾಂಕ ವಾಧ್ರ

ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ವಾಧ್ರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಅವಧಿಯಲ್ಲಿ ಅಭಿವೃದ್ಧಿಯಾಗಿದ್ದು ಮೋದಿ ಅವರ ಸ್ನೇಹಿತರಷ್ಟೇ ಎಂದು ಆರೋಪಿಸಿದ್ದಾರೆ. 
ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ
Updated on

ಲಖನೌ: ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ವಾಧ್ರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಅವಧಿಯಲ್ಲಿ ಅಭಿವೃದ್ಧಿಯಾಗಿದ್ದು ಮೋದಿ ಅವರ ಸ್ನೇಹಿತರಷ್ಟೇ ಎಂದು ಆರೋಪಿಸಿದ್ದಾರೆ. 

ಜನತೆ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಬೇಕು, ಮೋದಿ ಅವರ ಕೈಗಾರಿಕೋದ್ಯಮಿಗಳಷ್ಟೇ ಅಭಿವೃದ್ಧಿ ಹೊಂದಿದ್ದಾರೆ ಜನರು ಮಾತ್ರ ಸಂಕಷ್ಟ ಎದುರಿಸುತ್ತಿದ್ದಾರೆ. 

ಕೇಂದ್ರ ಸರ್ಕಾರದ ಕೊರೋನಾ ನಿರ್ವಹಣೆಯ ವಿಷಯವಾಗಿಯೂ ಪ್ರಿಯಾಂಕ ವಾಧ್ರ, ದೇಶಾದ್ಯಂತ ಜನರು ಸಿಕ್ಕಿಹಾಕಿಕೊಂಡಿದ್ದರು, ಕಾಂಗ್ರೆಸ್ ಆಡಳಿತವಿರುವ ಛತ್ತೀಸ್ ಗಢದಿಂದ ತಮ್ಮ ಪಕ್ಷಕ್ಕೆ ಆಕ್ಸಿಜನ್ ತರುವುದಕ್ಕೆ ಬಿಡಲಿಲ್ಲ ಎಂದು ಆರೋಪಿಸಿದ್ದಾರೆ. 

ಕಾಂಗ್ರೆಸ್ ಸರ್ಕಾರ ಸ್ಥಾಪಿಸಿದ್ದ ಸಾರ್ವಜನಿಕ ಕ್ಷೇತ್ರದ ಸಂಸ್ಥೆಗಳನ್ನು ಪ್ರಧಾನಿ ಅವರ ದೊಡ್ಡ ದೊಡ್ಡ ಸ್ನೇಹಿತರಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಪ್ರಿಯಾಂಕ ವಾಧ್ರ ಗಂಭೀರ ಆರೋಪ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com