ಮುಂದಿನ ವರ್ಷದ ಮೇ ತಿಂಗಳವರೆಗೂ ಉಚಿತ ಪಡಿತರ ವಿತರಣೆ ವಿಸ್ತರಿಸಲು ದೆಹಲಿ ಸಂಪುಟ ತೀರ್ಮಾನ

ಮುಂದಿನ ವರ್ಷದ ಮೇ. 31ರವರೆಗೂ ನಗರದಲ್ಲಿ ಉಚಿತ ಪಡಿತರ ವಿತರಣೆಯನ್ನು ವಿಸ್ತರಿಸಲು ದೆಹಲಿ ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ತಿಳಿಸಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ನವದೆಹಲಿ: ಮುಂದಿನ ವರ್ಷದ ಮೇ. 31ರವರೆಗೂ ನಗರದಲ್ಲಿ ಉಚಿತ ಪಡಿತರ ವಿತರಣೆಯನ್ನು ವಿಸ್ತರಿಸಲು ದೆಹಲಿ ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ತಿಳಿಸಿದರು.

ಇಂದು ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೊರೋನಾವೈರಸ್ ಪ್ರಾರಂಭವಾದಾಗಿನಿಂದ ಆರಂಭಿಸಲಾದ ಉಚಿತ ಪಡಿತರ ವಿತರಣೆ ಅವಧಿ ಪೂರ್ಣಗೊಂಡಿದೆ. ಆದ್ದರಿಂದ ಇದನ್ನೂ ಇನ್ನು ಆರು ತಿಂಗಳ ಕಾಲ ವಿಸ್ತರಿಸಲಾಗಿದೆ. ಮುಂದಿನ ವರ್ಷದ ಮೇ ತಿಂಗಳವರೆಗೂ ಮುಂದುವರೆಸಲು ಸಂಪುಟ ಸಭೆ ತೀರ್ಮಾನಿಸಿದೆ ಎಂದು ಕೇಜ್ರಿವಾಲ್ ವರ್ಚುಯಲ್ ಪ್ರೆಸ್ ಕಾನ್ಫರೆನ್ಸ್ ನಲ್ಲಿ ಹೇಳಿದರು.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ಮತ್ತು ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ್ ಅನ್ನ ಯೋಜನೆ ಫಲಾನುಭವಿಗಳಿಗೆ ದೆಹಲಿ ಸರ್ಕಾರ ಉಚಿತವಾಗಿ ಪಡಿತರ ವಿತರಿಸುತ್ತಿದೆ. ದೆಹಲಿಯಲ್ಲಿ ಸುಮಾರು 2,000 ನ್ಯಾಯ ಬೆಲೆ ಅಂಗಡಿಗಳಿದ್ದು, 17, 77 ಲಕ್ಷ ಪಡಿತರ ಕಾರ್ಡ್ ದಾರರು ಮತ್ತು  ಸುಮಾರು 72. 78 ಲಕ್ಷ ಫಲಾನುಭವಿಗಳಿದ್ದಾರೆ. ಪಡಿತರ ಅಂಗಡಿಗಳ ಮೂಲಕ ಉಚಿತವಾಗಿ ಪಡಿತರ ನೀಡಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com